ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಜಾತಿಯ 18 ರಿಂದ 40 ವರ್ಷದ ಯುವಕ ಮತ್ತು ಯುವತಿಯರಿಗೆ ಜಿಮ್ ಫಿಟ್ನೆಸ್, ನಿರೂಪಣಾ ಮತ್ತು ವಾರ್ತಾವಾಚಕ ತರಬೇತಿ ಶಿಬಿರಗಳನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಜ.27 ರಿಂದ ೆ.10 ರವರೆೆಗೆ 15 ದಿನಗಳ ಅವಧಿಯ ಜಿಮ್ ಪಿಟ್ನೆಸ್ ತರಬೇತಿಯು ದ್ವಿತೀಯ ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಅರ್ಹತಾ ಮಾನದಂಡಗಳನ್ನು ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಅರ್ಜಿ ಪಡೆದು ಜ.23ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ 08226-224932, ಮೊ.ಸಂ 9916466659 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.