Sports, set of athletes of various sports disciplines. Isolated vector silhouettes. Run, soccer, hockey, volleyball, basketball, rugby, baseball, american football, cycling, golf 
ಜಿಲ್ಲೆ

ವಾರ್ಷಿಕ ಕ್ರೀಡಾಕೂಟ ಇಂದು, ನಾಳೆ

ಚಿತ್ರದುರ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಎರಡು ದಿನ 2023ರ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ನ. 26ರಂದು ಬೆಳಗ್ಗೆ 9ಕ್ಕೆ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಪ್ಯಾರಾ ಒಲಂಪಿಕ್ ಕ್ರೀಡಾಪಟು ಆರ್.ಟಿ.ಪ್ರಸನ್ನಕುಮಾರ್ ಉದ್ಘಾಟಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ್ ಮೀನಾ ಭಾಗವಹಿಸುವರು. 27ರಂದು ಸಂಜೆ 4ಕ್ಕೆ ನಡೆಯುವ ಸಮಾರೋಪದಲ್ಲಿ ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಇಲಾಖೆ ತಿಳಿಸಿದೆ.