ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುವ ಆಲೂರು-ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕರ ತಂಡ. 
ಜಿಲ್ಲೆ

ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

ಅಭಿನಯ್ ಎಚ್.ಎಂ

ಶನಿವಾರಸಂತೆ: ಮಡಿಕೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಮೀಪದ ಆಲೂರು-ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕರ ತಂಡ ಜಿಲ್ಲೆಗೆ ಪ್ರಥಮ ಸ್ಥಾನ ಸ್ಥಾನ ಪಡೆಯುವ ಮೂಲಕ ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ.

ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಬಾಲಕರ ತಂಡ ಮಡಿಕೇರಿ ತಾಲೂಕಿನ ತಂಡವನ್ನು ಸೋಲಿಸಿದೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ವಾಲಿಬಾಲ್ ಪದ್ಯಾವಳಿಯಲ್ಲಿ ಬಾಲಕರ ತಂಡ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಆಲೂರು-ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕ್ರೀಡಾ ತರಬೇತುದಾರ ಹಂಚೇಟ್ಟಿರ ಪಿ.ಕರುಂಬಯ್ಯ ಮತ್ತು ಶಾಲೆ ಮುಖ್ಯ ಶಿಕ್ಷಕ ಎಸ್.ಕೆ.ಉದಯ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.