ಜಿಲ್ಲೆ

ವಾಲ್ಮೀಕಿ ಭವನಕ್ಕೆ ಅನುದಾನ ಕೊಡಿ

ಬೀದರ್: ಬೀದರ್ ನಗರದಲ್ಲಿ ನನೆಗುದಿಗೆ ಬಿದ್ದಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ಕಟ್ಟಡ ಕಾಮಗಾರಿ ಕೂಡಲೇ ಪ್ರಾರಂಭಿಸಿ, 1 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಸಮಾಜಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಕೋರಲಾಗಿದೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಬುಧವಾರ ಸಚಿವರಿಗೆ ಭೇಟಿಯಾಗಿ ಮನವಿಪತ್ರ ಸಲ್ಲಿಸಿ, ಟೋಕರೆ ಕೋಳಿ ಸಮಾಜದವರು ಜಿಲ್ಲಾ ಕೇಂದ್ರದಲ್ಲಿ ಸಭೆ, ಸಮಾರಂಭ, ಮದುವೆ ಸೇರಿ ವಿವಿಧ ಕಾರ್ಯಕ್ರಮ ಆಯೋಜಿಸಲು ಸಮುದಾಯ ಭವನವಿಲ್ಲ. ಚಿಕ್ಕಪೇಟ್ ಸಮೀಪ ಸಮುದಾಯ ಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ನೀಡಿದ ಸ್ಥಳದಲ್ಲಿ ಕಟ್ಟಡ ನಿರ್ಮಾಣಕ್ಕೆ 1 ಕೋಟಿ ರೂ. ಒದಗಿಸಲು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ 2 ಲಕ್ಷಕ್ಕೂ ಅಧಿಕ ಜನಸಂಖ್ಯೆ ಟೋಕರೆ ಕೋಳಿ ಸಮುದಾಯ ಹೊಂದಿದೆ. ಈ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ವಂಚಿತವಾಗಿದೆ. ಈ ಸಮುದಾಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಕೋರಿದ್ದಾರೆ. ಪ್ರಮುಖರಾದ ಮಾರುತಿ ಬೌದ್ಧೆ, ಫರ್ನಾಂಡಿಸ್ ಹಿಪ್ಪಳಗಾಂವ್ ಇತರರಿದ್ದರು.