ನೆಲಮಂಗಲ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ-48ರ ಅಂಚೆಪಾಳ್ಯ ಮೇಲ್ಸೆತುವೆ ಬಳಿ ಶನಿವಾರ ರಾತ್ರಿ ವಾಹನ ಡಿಕ್ಕಿ ಹೊಡೆದು ಅಪರಿಚಿತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು-ತುಮಕೂರು ರಸ್ತೆಯಲ್ಲಿ ಅವಘಡ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಪಾದಚಾರಿ ಸ್ಥಳದಲ್ಲೇ ಕೊನೆಯುಸಿಳೆದಿದ್ದಾನೆ. ಮೃತ ದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿರಿಸಲಾಗಿದ್ದು, ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.