ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್‌ವಾಹನವೊಂದು ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡಿದ್ದಾರೆ.
ತಾಲೂಕಿನ ವೆಂಕಟಯ್ಯನಛತ್ರ ಗ್ರಾಮದ ನಿವಾಸಿ ರವಿಗೌಡ ಎಂಬುವವರು ಸೋಮವಾರ ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ವೇಗವಾಗಿ ಹೋಗುತ್ತಿದ್ದ ಗೂಡ್ಸ್ ವಾಹನವೊಂದು ಸೈಕಲ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಸವಾರನಿಗೆ ಸಾಕಷ್ಟು ಪೆಟ್ಟಾಗಿದೆ. ವಿಷಯ ತಿಳಿದ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಯಾಳು ರವಿಗೌಡ ಅವರನ್ನು ಚಿಕಿತ್ಸೆಗಾಗಿ ಸಿಮ್ಸ್ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.