ಜಿಲ್ಲೆ

ವಿ.ಆರ್.ಶೈಲಜಾ ಅಧಿಕಾರ ಸ್ವೀಕಾರ

ಮೈಸೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಅಧಿಕ ಪ್ರಭಾರ ಕುಲಸಚಿವರಾಗಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವೆ ವಿ.ಆರ್.ಶೈಲಜಾ ಸೋಮವಾರ ಅಧಿಕಾರ ಸ್ವೀಕರಿಸಿದರು. ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಾಗೇಶ್ ವಿ.ಬೆಟ್ಟಕೋಟೆ ಹೂಗುಚ್ಚ ನೀಡಿ ಸ್ವಾಗತಿಸಿದರು.
ಈ ಹಿಂದೆ ಸಂಗೀತ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ, ನಿಯೋಜನೆ ಮೇರೆಗೆ ನೇಮಕಗೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ಡಾ.ಟಿ.ಎಸ್.ದೇವರಾಜ ಅವರನ್ನು ಮಾತೃ ಇಲಾಖೆಗೆ ಸ್ವಂತ ಕೋರಿಕೆ ಮೇರೆಗೆ ವಾಪಸ್ ಕಳುಹಿಸಲಾಗಿದೆ.