ಭದ್ರಾವತಿ: ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರ ಸಂಘದ ನಿಯೋಗ ಶುಕ್ರವಾರ ದೆಹಲಿಯಲ್ಲಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು. ವಿಐಎಸ್‌ಎಲ್ ಕಾರ್ಖಾನೆಯನ್ನು ಖಾಸಗೀಕರಣ ಪಟ್ಟಿಯಿಂದ ಕೈಬಿಟ್ಟು, ನವೀಕರಣಕ್ಕೆ ಅಗತ್ಯವಿರುವ ಬಂಡವಾಳವನ್ನು ಸೈಲ್ ಮೂಲಕ ಹೂಡಿಕೆ ಮಾಡಿಸುವಂತೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು. ಮನವಿ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ, ಈ ಸಂಬಂಧ ಕೇಂದ್ರ ಸರ್ಕಾರದ ಜೊತೆ ಚರ್ಚಿಸಲಾಗುವುದು. ಕಾರ್ಖಾನೆಗೆ ಅಗತ್ಯವಾದ ಬಂಡವಾಳ ಹೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು ಎಂದು ಕಾರ್ಮಿಕ ಸಂಘದ ಅಧ್ಯಕ್ಷ ಜೆ.ಜಗದೀಶ್ ತಿಳಿಸಿದರು. ಪ್ರಧಾನ ಕಾರ್ಯದರ್ಶಿ ಬಸಂತಕುಮಾರ್, ಕಾರ್ಯದರ್ಶಿ ಮನು, ಖಜಾಂಚಿ ಮೋಹನ್ ಇದ್ದರು.