ವಿಜಯಪುರ: ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಹಾಗೂ ಎಂಆರ್‌ಎನ್(ನಿರಾಣಿ) ಫೌಂಡೇಶನ್ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುರೇಶ ಬಿರಾದಾರ ಹೇಳಿದರು. ವಿಜಯಪುರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆಗಷ್ಟ್ 19 ರಂದು ಬೆಳಗ್ಗೆ 9 ರಿಂದ ಸಂಜೆ 4ರ ವರೆಗೂ ಶಾಂತಿನಿಕೇತನ ಶಿಕ್ಷಣ ಸಮೂಹ ಸಂಸ್ಥೆಯ ನಮೃತಾ ಕಾಲೋನಿಯಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಈ ಮೇಳದಲ್ಲಿ 70ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದ್ದು, ಕೋವಿಡ್ ನಿಂದಾಗಿ ಹಲವರು ಉದ್ಯೋಗದಿಂದ ವಂಚಿತರಾಗಿದ್ದಾರೆ. ಅದಕ್ಕಾಗಿ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹೊಂದಿದವರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಇನ್ನು ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆ, ಪಾಸಪೋರ್ಟ್ ಫೋಟೊ, ಆಧಾರ್ ಕಾರ್ಡ್, ಸ್ವ ವಿವರದೊಂದಿಗೆ ಆಗಮಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಈರಣ್ಣ ಪಟ್ಟಣಶೆಟ್ಟಿ, ರಾಜು ಕಳಸಗೊಂಡ ಇತರರು ಇದ್ದರು.