ಹನೂರು ಸಮೀಪದ ಆರ್.ಎಸ್.ದೊಡ್ಡಿ ಗ್ರಾಮದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಯ ಪಲ್ಲಕ್ಕಿ ಉತ್ಸವವು ವಿಜೃಂಭಣೆಯಿಂದ ನಡೆಯಿತು 
ಜಿಲ್ಲೆ

ವಿಜೃಂಭಣೆಯ ಬೆಟ್ಟಳ್ಳಿ ಮಾರಮ್ಮ ದೇವಿಯ ಪಲ್ಲಕ್ಕಿ ಉತ್ಸವ

ಹನೂರು: ಪಟ್ಟಣದ ಆರ್.ಎಸ್ ದೊಡ್ಡಿ ಗ್ರಾಮದಲ್ಲಿ ಗುರುವಾರ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಯ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು.

ಪಲ್ಲಕ್ಕಿ ಉತ್ಸವದ ಅಂಗವಾಗಿ ಗ್ರಾಮದ ಮಹದೇಶ್ವರ ದೇಗುಲ ಸಮೀಪದ ಕರೆ ಏರಿ ಮೇಲೆ ವಿವಿಧ ಪುಷ್ಪ, ನಿಂಬೆಹಣ್ಣು ಹಾಗೂ ವೀಳ್ಯದೆಲೆ ಹಾರದಿಂದ ಸಿಂಗರಿಸಿದ್ದ ಪಲ್ಲಕ್ಕಿಯಲ್ಲಿ ಬೆಟ್ಟಳ್ಳಿ ಮಾರಮ್ಮ ದೇವಿಯ ಚಿತ್ರವನ್ನಿಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ವಾದ್ಯಮೇಳದೊಂದಿಗೆ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು

.ಈ ವೇಳೆ ಮಹಿಳೆಯರು ಹಣ್ಣು- ಕಾಯಿ ನೀಡಿ ಪೂಜೆ ಸಲ್ಲಿಸಿದರು. ದಾರಿಯುದ್ದಕ್ಕೂ ಯುವಕರು ವಾದ್ಯದ ತಾಳಕ್ಕೆ ಕುಣಿದು ಕುಪ್ಪಳಿಸಿದರು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಹರಕೆ ಹೊತ್ತ ಭಕ್ತರು ಕಾಣಿಕೆ ಸಲ್ಲಿಸಿದರು. ಪೂಜಾ ಕೈಂಕರ್ಯವನ್ನು ಅರ್ಚಕ ಜಯಂತ್ ರಾವ್ ಸಿಂಧ್ಯೆ ನೆರವೇರಿಸಿದರು.