ಬಾಗಲಕೋಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಮಹಾತ್ಮಾಗಾಂÃಯವರ ೧೫೫ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನವನ್ನು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಬುಧವಾರ ವಿತರಿಸಿದರು.
ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ನಡೆದ ಗಾಂÃ ಹಾಗೂ ಶಾಸ್ತ್ರೀ ಜಯಂತಿ ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರೌಡಶಾಲಾ ವಿಭಾಗದಲ್ಲಿ ಬೋಡನಾಯಕದಿನ್ನಿ ಸರ್ಕಾರಿ ಪ್ರೌಢಶಾಲೆಯ ಸುರಕ್ಷಾ ಆದಾಪೂರ (ಪ್ರಥಮ), ಯಡಹಳ್ಳಿ ಸರ್ಕಾರಿ ಪ್ರೌಢಶಾಲೆಯ ಪೃಥ್ವಿ ಬಗಲಿ (ದ್ವಿತೀಯ), ವಿದ್ಯಾಗಿರಿ ಸೆಂಟ್ ಅನ್ನಿಸ್ ಕಾಂನ್ವೆಂಟ್ ಹೈಸ್ಕೂಲಿನ ಗಿರಿಧರ ಬಿ.ಬಿ (ತೃತೀಯ) ಬಹುಮಾನ ಪಡೆದುಕೊಂಡರು.
ಪಿಯುಸಿ ವಿಭಾಗದಲ್ಲಿ ಹುನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಐಶ್ವರ್ಯ ಗಾಣಗೇರ (ಪ್ರಥಮ), ಇಳಕಲ್ಲ ಎಸ್.ವಿ.ಎಂ ಮಹಿಳಾ ಪಿಯು ಕಾಲೇಜಿನ ವಿಜಯಲಕ್ಷಿ÷್ಮÃ ಮಡಿವಾಳರ (ದ್ವಿತೀಯ) ಹಾಗೂ ಮುಧೋಳ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸ್ವಾತಿ ದೊಡಮನಿ (ತೃತೀಯ) ಸ್ಥಾನ ಪಡೆದುಕೊಂಡರು. ಪದವಿ, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ಜಮಖಂಡಿ ರಾಣ ಚೆನ್ನಮ್ಮ ವಿವಿ ಸ್ನಾತಕೋತ್ತರ ಕೇಂದ್ರದ ಮಹಾಂತೇಶ ಕೋಷ್ಠಿ (ಪ್ರಥಮ), ನವನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾವ್ಯ ಚಿಪ್ಪಲಕಟ್ಟು (ದ್ವಿತೀಯ), ದ್ಯಾಮಣ್ಣ ಕಂಬಾರ (ತೃತೀಯ) ಬಹುಮಾನ ಪಡೆದುಕೊಂಡರು.
ಗಾಂÃಽ ಜಯಂತಿ ಅಂಗವಾಗಿ ರಾಜ್ಯದ ಪ್ರತಿ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲಾ, ಪಿಯುಸಿ, ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು, ಇದರಲ್ಲಿ ಪ್ರತಿ ವಿಭಾಗಕ್ಕೆ ಪ್ರತ್ಯೇಕವಾಗಿ ನಾಲ್ಕು ವಿಷಯಗಳನ್ನು ಪ್ರಬಂಧ ಸ್ಪರ್ಧೆಗೆ ನೀಡಲಾಗಿತ್ತು, ಅದರಲ್ಲಿ ವಿದ್ಯಾರ್ಥಿಗಳು ತಮಗೆ ಇಷ್ಟವಾದ ವಿಷಯವನ್ನು ಆಯ್ದುಕೊಂಡು ಪ್ರಬಂಧ ಬರೆಯಲು ಅವಕಾಶ ನೀಡಲಾಗಿತ್ತು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂರು ವಿಭಾಗದ ತಲಾ ಮೂರು ಅತ್ಯುತ್ತಮ ಪ್ರಬಂಧಗಳನ್ನು ರಾಜ್ಯ ಮಟ್ಟಕ್ಕೆ ನಾಮನಿರ್ದೇಶನ ಮಾಡಲಾಗಿದೆ.
ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾಽಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಜಿಲ್ಲಾ ವಾರ್ತಾಕಾರಿ ಕಸ್ತೂರಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.