filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.4124074, 0.23920836);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 38; 
ಜಿಲ್ಲೆ

ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಅತ್ಯಗತ್ಯ

*ಇಸ್ರೋ ವಿಶ್ರಾಂತಿ ಹಿರಿಯ ವಿಜ್ಞಾನಿ ಡಾ.ಬಿ.ಆರ್.ಗುರುಪ್ರಸಾದ್ ಸಲಹೆ 

*ರಾಜ್ಯಮಟ್ಟದ ವಿಜ್ಞಾನ ಅರಿವು ಕಾರ್ಯಕ್ರಮ
ಚಾಮರಾಜನಗರ: ಆಸಕ್ತಿದಾಯಕ ಮತ್ತು ಆಶ್ಚರ್ಯವನ್ನು ಹುಟ್ಟಿಸುವ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಅತ್ಯಗತ್ಯವಾಗಿದೆ ಎಂದು ಇಸ್ರೋ ವಿಶ್ರಾಂತಿ ಹಿರಿಯ ವಿಜ್ಞಾನಿ ಮತ್ತು ಜವಾಹರಲಾಲ್ ನೆಹರು ತಾರಾಲಯ ನಿರ್ದೇಶಕ ಡಾ.ಬಿ.ಆರ್.ಗುರುಪ್ರಸಾದ್ ಹೇಳಿದರು.
ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಆವರಣದಲ್ಲಿ ಜೆಎಸ್ಎಸ್ ಮಹಿಳಾ ಕಾಲೇಜು ಆಂತರಿಕ ಗುಣಮಟ್ಟ ಖಾತರಿ ಸಮಿತಿ, ಗ್ರ್ಯಾವಿಟಿ ಸೈನ್ಸ್ ಫೌಂಡೇಶನ್ ಹಾಗೂ ಬೆಂಗಳೂರಿನ ಜವಾಹರ್ ಲಾಲ್ ನೆಹರು ತಾರಾಲಯ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯಮಟ್ಟದ ವಿಜ್ಞಾನ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅನೇಕ ಶಕ್ತ ರಾಷ್ಟ್ರಗಳ ಸಾಲಿನಲ್ಲಿದೆ. ಅದರ ಭಾಗವಾಗಿ ಅಂತರಿಕ್ಷ ಸಂಶೋಧನೆ, ಅನ್ವೇಷಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಮುಂದಿದೆ. ದೇಶದಲ್ಲಿ 6 ಪೀಳಿಗೆಯ ಉಡಾವಣಾ ವಾಹನಗಳನ್ನು ನಿರ್ಮಾಣವಾಗಿದೆ. ಸುಮಾರು 430 ಕ್ಕೂ ಹೆಚ್ಚು ವಿದೇಶಿ ಉಪಗ್ರಹನ್ನು ಉಡಾಯಿಸಲಾಗಿದೆ. ಈ ಸಾಮರ್ಥ್ಯ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಒತ್ತು ನೀಡಿದ ಫಲವಾಗಿದೆ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವನ್ನು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರಸ್ತುತ ಸಂದರ್ಭದಲ್ಲಿ ವಿಜ್ಞಾನದ ಬಗ್ಗೆ ಅರಿವು ಅನಿವಾರ್ಯವಾಗಿದೆ. ವಿಜ್ಞಾನ ಆಸಕ್ತಿದಾಯಕ, ಆಶ್ಚರ್ಯ, ಕುತೂಹಲವನ್ನು ಹುಟ್ಟಿಸುವಂತದ್ದಾಗಿದ್ದು, ಇದನ್ನು ಸಾಮಾನ್ಯ ಜನರಿಗೆ ತಲುಪಿಸಬೇಕಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ಇಂತಹ ಕಾರ್ಯಕ್ರಮಗಳು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿಯೇ ಅನೇಕ ವಿಜ್ಞಾನಿಗಳು ವಿಜ್ಞಾನ ಸಂಶೋಧನೆ ವಿಷಯದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದರು. ದೇಶದಲ್ಲಿ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳು
ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಬೆಂಬಲ ನೀಡಿದ್ದಾರೆ. ದೇಶ ಇದನ್ನು ತನ್ನ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡದೇ, ಅಂತರಿಕ್ಷ ಮತ್ತು ಖಗೋಳ ಸಂಶೋಧನೆಗೆ ಬಳಸಿದೆ. ಅದರ ಮೂಲಭೂತ ವಿಷಯಗಳನ್ನು ಮಾದರಿಯನ್ನು ಪ್ರದರ್ಶಿಸಲಾಗುತ್ತಿದೆ. ವಿಜ್ಞಾನದ ಮೂಲಭೂತ ವಿಷಯಗಳನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶವಿದೆ. ಚಂದ್ರನ ಮೇಲೆ ನೀರು ಇದೆ ಎಂದು ಖಚಿತಪಡಿಸಿದ್ದು, ಮಂಗಳಗ್ರಹಕ್ಕೆ ತಲುಪಿದ ಮೊದಲ ಏಷ್ಯಾದ ರಾಷ್ಟ್ರ ಭಾರತವಾಗಿದೆ. ಮೊದಲ ಪ್ರಯತ್ನದಲ್ಲೇ ಇಸ್ರೋ ಶೇ.100 ಧ್ಯೇಯವನ್ನು ಸಾಧಿಸಿದ ಸಂಸ್ಥೆಯಾಗಿದೆ. ದೇಶವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಅವಕಾಶಗಳು ಇದ್ದು, ವಿದ್ಯಾರ್ಥಿಗಳು ವಿಜ್ಞಾನ ಮತ್ತು ಸಂಶೋಧನೆಯ ಕಡೆಗೆ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ಗ್ರ್ಯಾವಿಟಿ ಸೈನ್ಸ್ ಫೌಂಡೇಶನ್ ಸಂಸ್ಥಾಪಕ ಕಾರ್ಯದರ್ಶಿ ಅಭಿಷೇಕ್ ಮಾತನಾಡಿ, ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕುರಿತು ಸಾಕಷ್ಟು ಆಸಕ್ತಿ ಹಾಗೂ ಕುತೂಹಲವಿದೆ. ಆದರೇ ಅವರಿಗೆ ಮಾಹಿತಿಯ ಕೊರತೆ ಇದೆ. ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸಿ, ಅವರನ್ನು ವಿಜ್ಞಾನಿಗಳಾಗಿ ತಯಾರು ಮಾಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ ಎಂದರು.
ಜೆಎಸ್ಎಸ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಮಹಾದೇವಸ್ವಾಮಿ, ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ಐಕ್ಯುಎಸಿ ಸಂಚಾಲಕ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ಪ್ರಾಧ್ಯಾಪಕಿ ಕೆ.ಎಸ್.ಸುಮ ಹಾಗೂ ಇತರರು ಹಾಜರಿದ್ದರು.
ಪ್ರಾತ್ಯಕ್ಷಿಕೆ ಪ್ರದರ್ಶನ: 
ಕಾರ್ಯಕ್ರಮದಲ್ಲಿ ವಿಜ್ಞಾನ, ತಂತ್ರಜ್ಞಾನ, ಖಗೋಳ ಶಾಸ್ತ್ರ, ಭೂಗೋಳ ಹಾಗೂ ಇನ್ನಿತರೆ ಮೂಲಭೂತ ವಿಷಯಗಳ ಕುರಿತು ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶನ ಮಾಡಲಾಯಿತು. ವಿದ್ಯಾರ್ಥಿಗಳು ಅವುಗಳನ್ನು ಕುತೂಹಲದಿಂದ ವೀಕ್ಷಣೆ ಮಾಡುವ ಮೂಲಕ ವಿಜ್ಞಾನದ ಕೌತುಕಗಳ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ವಿವಿಧ ವಿಷಯಗಳ ಕುರಿತು ನೆಹರು ತಾರಾಲಯದ ಸಂಶೋಧನಕರಾದ ಲಕ್ಷ್ಮೀ, ಡಾ.ಎಂಎನ್.ಆನಂದ್, ರೇವಣ ಸಿದ್ದಪ್ಪ, ಲೋಕೇಶ್ ಹಾಗೂ ಮುನೇಶ್ವರ ಕಾರ್ಯಾಗಾರ ನಡೆಸಿಕೊಟ್ಟರು.