ಜಿಲ್ಲೆ

ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ನಾಳೆ

ಹನೂರು: ಸೆ.7ರಂದು ರಾತ್ರಿ ಸಂಭವಿಸಲಿರುವ ಪೂರ್ಣ ಚಂದ್ರ ಗ್ರಹಣದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ನಿಸರ್ಗದ ಸುಂದರ ಕ್ಷಣವನ್ನು ಕಣ್ತುಂಬಿಕೊಳ್ಳುವ ಉದ್ದೇಶದಿಂದ ಸೆ.5ರಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಆಯೋಜಿಸಿರುವ ರಸಪ್ರಶ್ನೆ ಸ್ಪರ್ಧೆಯ ಪ್ರಯೋಜನ ಪಡೆದುಕೊಳ್ಳುವಂತೆ ಸಮಿತಿಯ ಜಿಲ್ಲಾ ಸಂಚಾಲಕ ಶಾಂತರಾಜು ತಿಳಿಸಿದ್ದಾರೆ.

ಸ್ಪರ್ಧೆಯು ಆನ್‌ಲೈನ್ ಮೂಲಕ ನಡೆಯಲಿದ್ದು, ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಹ ಭಾಗವಹಿಬಹುದು. ಸೆ.5ರಂದು ಸಂಜೆ 5 ಗಂಟೆಯೊಳಗೆ ಉಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. 7 ಗಂಟೆಗೆ ಸ್ಪರ್ಧೆ ನಡೆಯಲಿದೆ. ಸೆ.6ರಂದು ಫಲಿತಾಂಶವನ್ನು ಪ್ರಕಟಿಸಲಾಗುವುದು. ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಸೆ.7ರ ರಾತ್ರಿ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.