ಹುಕ್ಕೇರಿ: ವಸಂತೋತ್ಸವ ನೆಪದಲ್ಲಿ ಮಹಾವೀರ ಶಿಕ್ಷಣ ಸಂಸ್ಥೆ ಆಯೋಜಿಸಿದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಆಹಾರ ಮೇಳ ಶ್ಲಾಘನೀಯ ಎಂದು ಅವುಜೀಕರ ಆಶ್ರಮದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು.
ಪಟ್ಟಣದ ಮಹಾವೀರ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಮತ್ತು ಆಹಾರ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳ ಪ್ರತಿಭೆ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ. ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ನಿವೃತ್ತ ಉಪನ್ಯಾಸಕ ಪಿ.ಜಿ.ಕೊಣ್ಣೂರ ಮಾತನಾಡಿ, ವಿದ್ಯಾರ್ಥಿಗಳು ತಾಂತ್ರಿಕತೆ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಅಧ್ಯಕ್ಷ ಮಹಾವೀರ ನಿಲಜಗಿ ಮಾತನಾಡಿ, ವಿದ್ಯಾರ್ಥಿಗಳ ಜ್ಞಾನ ವೃದ್ಧಿಸಲು ವಿಜ್ಞಾನ ವಸ್ತು ಪ್ರದರ್ಶನ ಮತ್ತು ಆಹಾರ ಮೇಳ ಆಯೋಜಿಸಿದ್ದೇವೆ ಎಂದು ತಿಳಿಸಿದರು.
ಮಹಾವೀರ ಉದ್ಯೋಗ ಸಮೂಹ ಸಂಸ್ಥೆ ಉಪಾಧ್ಯಕ್ಷ ಪ್ರಜ್ವಲ್ ನಿಲಜಗಿ, ಪದ್ಮಶ್ರೀ ನಿಲಜಗಿ, ಅನ್ನಪೂರ್ಣಾ ನಿಲಜಗಿ, ಅಶೋಕ ಪಾಟೀಲ, ಬಾಹುಬಲಿ ಸೊಲ್ಲಾಪುರೆ, ಸುನೀಲ ಟಿಬಲೆ, ಅಪರಾಯಿ ಘೋಡಗೇರಿ, ಸಿದ್ದಪ್ಪ ಹುಲಮನಿ, ರವಿ ಸಂಗೊಳ್ಳಿ, ರಮೇಶ ಮಗದುಮ್ಮ, ಶೀಲಾ ಬಿಲಕಾರ, ಶಿಕ್ಷಕ ಸಂಗಮೇಶ ಕರವನ್ನವರ ಇತರರಿದ್ದರು.