ಕಲಬುರಗಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಗರದ ಪ್ರಾದೇಶಿಕ ಕಚೇರಿಯಲ್ಲಿ ಜ.18, 19ರಂದು ಯುಕ್ತಿ ಘೋಷವಾಕ್ಯದಡಿ ಪ್ರಾದೇಶಿಕ ತಾಂತ್ರಿಕ-ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕದ ವಿವಿಧ ವಿವಿ, ತಾಂತ್ರಿಕ ವಿದ್ಯಾಲಯ ಹಾಗೂ ವಿದ್ಯಾ ಸಂಸ್ಥೆಗಳು ಭಾಗವಹಿಸಲಿವೆ ಎಂದು ವಿಟಿಯು ಪ್ರಾದೇಶಿಕ ಕಚೇರಿ ನಿರ್ದೇಶಕ ಡಾ.ಬಸವರಾಜ ಗಾದಗೆ ತಿಳಿಸಿದರು.
ವಿಟಿಯು ಕುಲಪತಿ ಡಾ.ವಿದ್ಯಾಶಂಕರ ಎಸ್.ಅಧ್ಯಕ್ಷತೆಯಲ್ಲಿ ೧೮ರಂದು ಬೆಳಗ್ಗೆ ೯.೩೦ಕ್ಕೆ ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಂದರೇಶ ಉದ್ಘಾಟಿಸಲಿದ್ದು, ಕರ್ನಾಟಕ ಆಡಳಿತಾತ್ಮಕ ನ್ಯಾಯಾಧಿಕರಣ ಸದಸ್ಯ ರಾಘವೇಂದ್ರ ಔರಾದಕರ್, ಪ್ರಸಾರ ಭಾರತಿ ಎಡಿಜಿ ಸುನೀಲ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಆಯುಕ್ತ ಚೇತನ್ ಆರ್., ಅರಣ್ಯಾಧಿಕಾರಿ ಸುಮಿತಕುಮಾರ್ ಭಾಗವಹಿಸುವರು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜ.೧೯ರಂದು ಸಂಜೆ ನಡೆಯುವ ಸಮಾರೋಪದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅಪ್ಪ, ಖ್ವಾಜಾ ಬಂದಾ ನವಾಜ್ ವಿವಿ ಕುಲಾಧಿಪತಿ ಡಾ.ಸೈಯ್ಯದ್ ಶಾಹ ಖುಸ್ರೋ ಹುಸೇನಿ, ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತಿಮಾ, ಬಸವರಾಜ ಮತ್ತಿಮಡು, ಎಚ್‌ಕೆಇ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ ಸೇರಿ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಪ್ರಮುಖರಾದ ಶಿವರಾಮೇಗೌಡ, ಡಾ.ಬ್ರಿಜ್‌ಭೂಷಣ, ಡಾ.ಶಂಭುಲಿAಗ ಇತರರಿದ್ದರು.