ಜಿಲ್ಲೆ

ವಿದೇಶಿ ವ್ಯಾಸಂಗಕ್ಕೆ ಸಾಲ ಸೌಲಭ್ಯ

ಬೆಳಗಾವಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇದರ ವ್ಯಾಪ್ತಿಗೆ ಬರುವ ಹಿಂದುಳಿದ ವರ್ಗಗಳ ಪ್ರವರ್ಗ&1, 2ಎ, 3ಎ ಮತ್ತು 3ಬಿ ಗೆ ಸೇರಿದ ವಿವಿಧ ನಿಗಮಗಳಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲದ ಸೌಲಭ್ಯ ಒದಗಿಸಲು ಆನ್​ಲೈನ್​ ಅರ್ಜಿ ಆಹ್ವಾನಿಸಲಾಗಿದೆ. ಪಿಎಚ್​.ಡಿ, ಡಾಕ್ಟರ್​ ಮತ್ತು ಮಾಸ್ಟರ್​ ಡಿಗ್ರಿ ಕೋರ್ಸ್​ಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಸೌಲಭ್ಯ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡುವಂತೆ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.