ಜಿಲ್ಲೆ

ವಿದೇಶಿಗರ ಮಾಹಿತಿ ಸಂಗ್ರಹಕ್ಕೆ ಸೂಚನೆ

ಕಲಬುರಗಿ: ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಹೊರ ದೇಶಗಳಿಂದ ಬರುವ ವಿದೇಶಿಗರ ಮಾಹಿತಿ ಸಂಗ್ರಹಿಸಿಟ್ಟುಕೊಳ್ಳುವಂತೆ ಜಿಲ್ಲೆಯ ಎಲ್ಲ ಅಧಿಕಾರಿಗಳಿಗೆ ಮೂಲಸೌಕರ್ಯ ಅಭಿವೃದ್ದಿ ಇಲಾಖೆ ಪ್ರಧಾನ ಕಾರ್ಯದಶರ್ಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿ ಕಪಿಲ್ ಮೋಹನ್ ಸೂಚನೆ ನೀಡಿ, ಈ ನಿಟ್ಟಿನಲ್ಲಿ ಗೃಹ ಇಲಾಖೆಯಿಂದ ಮಾಹಿತಿ ಪಡೆದುಕೊಳ್ಳುವಂತೆಯೂ ಹೇಳಿದರು.
ಕರೊನಾ ಸೋಂಕು ತಡೆ ಕುರಿತಂತೆ ಬುಧವಾರ ನಗರದಲ್ಲಿ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ಸ್ ನಡೆಸಿದ ಅವರು ಸೋಂಕು ತಡೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಕೊಳ್ಳುವಂತೆ ಸಲಹೆ ಮಾಡಿದರು. ಈ ಮೂರು ಜಿಲ್ಲೆಗಳು ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಹೊಂದಿಕೊಂಡಿರುವುದನ್ನು ಗಮನದಲ್ಲಿಟ್ಟುಕೊಳ್ಳುವಂತೆ ಅವರು ಹೇಳಿದರು.
ಭಾರತಿಯ ಪ್ರಜೆ ಅಲ್ಲದ ಹೊರದೇಶದಿಂದ ಬರುವ ಯಾವುದೇ ವ್ಯಕ್ತಿ ಜಿಲ್ಲಾ ಪೊಲೀಸ್ ಅಧೀಕ್ಷಕರ (ಫಾರೆನ್ ರಜಿಸ್ಟ್ರೇಷನ್ ಆಫೀಸರ್ ಅಧೀಕ್ಷಕರು) ಇವರ ಬಳಿ ಕಡ್ಡಾಯವಾಗಿ ನೊಂದಣಿ ಮಾಡಿಸಬೇಕು. 20 ದಿನಗಳಿಂದ ವಿದೇಶಗಳಿಂದ ಬಂದಿಳಿದವರ ಮಾಹಿತಿ ಸಂಗ್ರಹಿಸಿ ಅವರ ಮೇಲೆ ನಿಗಾ ವಹಿಸಿರಿ. ಅನ್ಯ ರಾಜ್ಯಗಳಿಂದ ಬರುವ ಜನರ ಮೇಲೂ ನಿಗಾ ವಹಿಸಿರಿ ಎಂದು ಕಪಿಲ್ ಮೋಹನ್ ಆದೇಶಿಸಿದರು.
ಗಡಿ ಜಿಲ್ಲೆ ಬೀದರ್, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಕ್ಕೆ ಹೊಂದಿಕೊಂಡಿದ್ದು, ಪುಣೆ, ಹೈದರಾಬಾದ್, ಮುಂಬೈನಿಂದ ಜನ ಬರುತ್ತಾರೆ. ಇಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು.
ಕಲಬುರಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ರೋಗ ಉಲ್ಬಣವಾಗದಂತೆ ನೋಡಿಕೊಳ್ಳಬೇಕು. ಕರೊನಾ ವಿರುದ್ಧದ ಹೋರಾಟದಲ್ಲಿ ಪ್ರಸ್ತುತ ಇರುವ ಸಕರ್ಾರಿ ವ್ಯವಸ್ಥೆಗಳ ಜತೆಗೆ ಖಾಸಗಿ ಅಸ್ಪತ್ರೆ ಮತ್ತು ಮೆಡಿಕಲ್ ಸಂಸ್ಥೆಗಳ ಸಹಾಯ ಅವಶ್ಯಕ. ಹೀಗಾಗಿ ಜಿಲ್ಲೆಯಲ್ಲಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ನಡೆಸಿ ಅವರಿಗೆ ಮಾಹಿತಿ ನೀಡಬೇಕು. ಅಗತ್ಯವಿದ್ದರೆ ಅವರ ಸೇವೆ ಪಡೆಯಬೇಕು ಎಂದು ಡಿ.ಸಿ.ಗಳಿಗೆ ನಿದರ್ೇಶನ ನೀಡಿದರು.
ಕರೊನಾ ವಿರುದ್ಧ ಜಿಲ್ಲೆಯಲ್ಲಿ ಕೈಕೊಂಡಿರುವ ಕ್ರಮಗಳ ವಿವರಗಳನ್ನು ಜಿಲ್ಲಾಧಿಕಾರಿ ಬಿ. ಶರತ್ ನೀಡಿದರು.
ಪ್ರಾದೇಶಿಕ ಆಯುಕ್ತ ಡಾ. ಎನ್. ವಿ. ಪ್ರಸಾದ್, ಜಿಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಪಿ.ರಾಜಾ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿದರ್ೇಶಕ ಡಾ. ಶಿವಾನಂದ ಸುರಗಾಳಿ, ವಿಶೇಷ ಅಧಿಕಾರಿ ಡಾ.ಶಿವರಾಜ ಸಜ್ಜನಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ್, ಇಎಸ್ಐಸಿ ಮೆಡಿಕಲ್ ಕಾಲೇಜಿನ ಡಾ.ಎ.ಎಲ್.ನಾಗರಾಜ ಇದ್ದರು.