ಹಾಸನ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿ ಜೀವನದಲ್ಲೇ ಮಕ್ಕಳಿಗೆ ವಿವಿಧ ಕ್ಷೇತ್ರಗಳ ಬಗ್ಗೆ ಮಾಹಿತಿ ಅಗತ್ಯ ಎಂದು ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಜೆ ಕಾಂತರಾಜು ಹೇಳಿದರು.
ರಾಜ್ಯ ಸಹಕಾರ ಮಹಾ ಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಜಿಲ್ಲಾ ಕೇಂದ್ರ ಸಗಟು ಮಾರಾಟ ಸಂಸ್ಥೆ, ಎವಿ ಕಾಂತಮ್ಮ ಮಹಿಳಾ ಕಾಲೇಜು ವತಿಯಿಂದ ನಗರದ ಎವಿಕೆ ಕಾಲೇಜು ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಡ ಶಾಲಾ ವಿದ್ಯಾರ್ಥಿಗಳಿಗೆ ಪ್ರಭಂದ ಸ್ಪರ್ಧೆ, ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಸಹಕಾರಿಕ್ಷೇತ್ರ, ಕ್ರೀಡೆ, ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ವಿಧ್ಯಾರ್ಥಿ ಜೀವನದಲ್ಲೇ ಮಕ್ಕಳು ತಿಳಿದುಕೊಂಡರೆ ಮಾತ್ರ ಸದೃಡ ಸಮಾಜ ನಿರ್ಮಾಣ ಸಾಧ್ಯ, ಗೊತ್ತಿರದ ವಿಚಾರಗಳ ಬಗ್ಗೆ ತಿಳಿಯಲು ಇತರರ ಬಗ್ಗೆ ಚರ್ಚಿಸಿ ಮಾಹಿತಿ ಪಡೆಯಬೇಕು. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಆಯೋಜಿಸಿರುವ ಚರ್ಚಾ ಸ್ಪರ್ಧೆ ಪ್ರಸ್ತುತ ವಿದ್ಯಮಾನಕ್ಕೆ ತೀರಾ ಅಗತ್ಯ ಎಂದರು.
ಯಾವುದೇ ಸ್ಪರ್ಧೆ ಹಾಗೂ ಕ್ರೀಡಾಕೂಟಗಳಲ್ಲಿ ಸೋಲು-ಗೆಲುವು ಸಾಮಾನ್ಯ, ಆದರೆ, ಭಾಗವಹಿಸುವಿಕೆ ಬಹಳ ಮುಖ್ಯ, ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಚರ್ಚಾ ಸ್ಪರ್ಧೆಗಳು ನಡೆಯಬೇಕು ಎಂದು ಕರೆ ನೀಡಿದರು.
ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ರೂಪೇಶ್ ಮಾತನಾಡಿ ಸಹಕಾರಿ ಕ್ಷೇತ್ರ ತುಂಬಾ ವಿಶಾಲವಾದುದು, ಸಹಕಾರಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಶಕ್ತಿ ತುಂಬುವ ಜೊತೆಗೆ ಲಕ್ಷಾಂತರ ಜನರಿಗೆ ಉದ್ಯೋಗವನ್ನು ಕಲ್ಪಿಸಿ ಕೊಟ್ಟಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಮೀನುಗಾರಿಕೆ ಹೀಗೆ ವಿವಿಧ ಇಲಾಖೆಗಳು ಸಹಕಾರಿ ಕ್ಷೇತ್ರದ ವ್ಯಾಪ್ತಿಗೆ ಬರಲಿವೆ. ಈ ಬಗ್ಗೆ ವಿಧ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಸಹಕಾರಿ ಒಕ್ಕೂಟದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ ಗೌಡ, ಜಿಲ್ಲಾ ಸಹಕಾರ ಸಗಟು ಮಾರಾಟ ಸಂಸ್ಥೆಯ ಅಧ್ಯಕ್ಷ ಅನುಸೂಯ ಪ್ರಕಾಶ್, ಎವಿಕೆ ಕಾಲೇಜಿನ ಪ್ರಾಂಶುಪಾಲ ಎಚ್.ಎಸ್. ಚಂದ್ರಶೇಖರ್, ನುಗ್ಗೆಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮುರುಳಾರಾಧ್ಯ, ಉಪನ್ಯಾಸಕ ಪ್ರಕಾಶ್, ಭಾರತಿ, ಸಹಕಾರಿ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರಾದ ನಾಗರಾಜ್ ಗೌಡ, ಶೇಷಾದ್ರಿ, ನಂಜುಂಡಸ್ವಾಮಿ ಇತರರು ಇದ್ದರು.