ಬೆಳಗೊಳ ಗ್ರಾಮದ ಬಲಮುರಿ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಪೊಲೀಸ್ ಕೆಡೆಟ್ ಯೋಜನೆಗೆ ಡಿವೈಎಸ್‌ಪಿ ಸಂದೇಶ್ ಕುಮಾರ್ ಚಾಲನೆ ನೀಡಿದರು. 
ಜಿಲ್ಲೆ

ವಿದ್ಯಾರ್ಥಿ ಪೊಲೀಸ್ ಕೆಡೆಟ್ ಯೋಜನೆಗೆ ಚಾಲನೆ

ಕೆ.ಆರ್.ಸಾಗರ: ಬೆಳಗೊಳ ಗ್ರಾಮದ ಬಲಮುರಿ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶ್ರೀರಂಗಪಟ್ಟಣ ವ್ಯಾಪ್ತಿಯ ವಿದ್ಯಾರ್ಥಿ ಪೊಲೀಸ್ ಕೆಡೆಟ್ ಯೋಜನೆಗೆ ಡಿವೈಎಸ್‌ಪಿ ಸಂದೇಶ್ ಕುಮಾರ್ ಮಂಗಳವಾರ ಚಾಲನೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ತುಂಬುವುದು, ರಸ್ತೆ ಸುರಕ್ಷತೆ, ಪೊಲೀಸ್ ಇಲಾಖೆಯ ಕುರಿತು ಮಾಹಿತಿ ಪಡೆಯುವುದು ಈ ವಿದ್ಯಾರ್ಥಿ ಪೊಲೀಸ್ ಕೆಡೆಟ್ ಯೋಜನೆಯ ಉದ್ದೇಶವಾಗಿದೆ. ತಾಲೂಕಿನ ಪ್ರತಿ ಪ್ರೌಢಶಾಲೆಯಿಂದ 40 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಅವರಿಗೆ ತರಬೇತಿ ನೀಡಲಾಗುತ್ತದೆ ಎಂದು ಸಂದೇಶ್ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ.ಶಕುಂತಲಾ, ಪಿಎಸ್‌ಐ ಲಿಂಗರಾಜು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.