ಜಿಲ್ಲೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಚಿತ್ರದುರ್ಗ: ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಜಿಲ್ಲೆಯ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆ ವೆಬ್‌ಸೈಟ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನಗಳಿಗೆ ಆಧಾರ್ ಬಯೋಮೆಟ್ರಿಕ್ ಅಥೆಂಟಿಕೇಷನ್ ಮತ್ತು ಇಕೆವೈಸಿ ಕಡ್ಡಾಯವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಬಯೋಮೆಟ್ರಿಕ್ ಅಥೆಂಟಿಕೇಷನ್ ಆ್ಯಂಡ್ ಇಕೆವೈಸಿ ಪ್ರ ಕ್ರಿಯೆಗೆ ನೋಂದಾಯಿಸಿಕೊಳ್ಳಬಹುದು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಚೇರಿ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅರ್ಜಿ ಪಡೆಯಲು ಹಾಗೂ ಇಕೆವೈಸಿಗೆ ಫೆಸಿಲಿಟೇಷನ್ ಕೇಂದ್ರ ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.