ಕೊಳ್ಳೇಗಾಲದ ಕಾರ್ನರ್ ಸ್ಟೋನ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ ನೂತನವಾಗಿ ವಿಜ್ಞಾನ ವಿಭಾಗ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎನ್.ಮಹೇಶ್ ಚಾಲನೆ ನೀಡಿದರು. ಮಂಜುನಾಥ್, ಪವನ್, ರೂಬನ್ ಮೊಸೆಸ್, ರೋಷನ್ ಪ್ರಿನ್ಸ್, ರಮ್ಯಾ ಇದ್ದರು.  
ಜಿಲ್ಲೆ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಜ್ಞಾನ ವಿಭಾಗ ಆರಂಭ

ಕೊಳ್ಳೇಗಾಲ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿ ಶಿಕ್ಷಕರು ಬೋಧನೆ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕಾಲೇಜಿನ ಚೇರ್ಮನ್ ಎನ್.ಮಹೇಶ್ ಹೇಳಿದರು.


ಪಟ್ಟಣದ ಕಾರ್ನರ್ ಸ್ಟೋನ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ ವಿಜ್ಞಾನ ವಿಭಾಗ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಲೇಜು ಆರಂಭವಾದ ಎರಡು ವರ್ಷದಲ್ಲೇ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಜ್ಞಾನ ವಿಭಾಗವನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.


ಡಿಡಿಪಿಯು ಮಂಜುನಾಥ ಪ್ರಸನ್ನ ಮಾತನಾಡಿ, ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಕಾಲೇಜಿಗೆ ಕೀರ್ತಿ ತಂದುಕೊ ಡಬೇಕು. ಶಿಕ್ಷಿತರಾದರೆ ಮಾತ್ರ ಸಾಧನೆ ಮಾಡಲು ಸಾಧ್ಯ. ಉನ್ನತ ಹುದ್ದೆಗಳನ್ನು ಪಡೆಯಲು ಸಾಧ್ಯ ಎಂದು ಸಲಹೆ ನೀಡಿದರು.


ಕಾಲೇಜಿನ ಅಧ್ಯಕ್ಷ ರೂಬನ್ ಮೊಸೆಸ್, ಕಾರ್ಯದರ್ಶಿ ಪವನ್, ಪ್ರಾಂಶುಪಾಲ ರೋಷನ್ ಪ್ರಿನ್ಸ್ ಇದ್ದರು.