ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್ಟೌನ್ ವತಿಯಿಂದ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಲೆಯ ಪ್ರಾಚಾರ್ಯು ಡಾ. ಕ್ಯಾಥರಿನ್ ದಿನೇಶ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಪೇದೆ ಶಿವಾನಂದ ತಿಮ್ಮಾಪುರ ಮಾತನಾಡಿ, ವಿದ್ಯಾರ್ಥಿಗಳ ಕೈಯಲ್ಲಿ ಪುಸ್ತರಗಳಿರಬೇಕೆ ಹೊರತು ಮೊಬೈಲ್ ಫೋನ್ಗಳಲ್ಲ. ವಾಟ್ಸ್ಆಪ್, ಇನ್ಸ್ಟಾಗ್ರಾಮ್ ಗೂಗಲ್, ಇನ್ನಿತರ ಆಪ್ಗಳ ದುರ್ಬಳಕೆ ಹೆಚ್ಚುತ್ತಿದೆ ಎಂದರು.
ಮೊಬೈಲ್ ಫೋನ್ನಲ್ಲಿ ಸ್ಟೇಟಸ್ ಇಡುವುದರಿಂದ ಯಾವ ರೀತಿ ಕಳ್ಳತನ, ದರೋಡೆಗಳು ನಡೆಯುತ್ತವೆ ಹಾಗೂ ಸುಳ್ಳು ಕರೆಗಳ ಮೂಲಕ ಮಾಹಿತಿ ಕಲೆ ಹಾಕಿ ಹಣ ಲೂಟಿ ಮಾಡುವವರ ಬಗ್ಗೆ ಜಾಗೃತಿ ಮೂಡಿಸಿದರು.
ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್ ಟೌನ್ ಅಧ್ಯಕ್ಷ ದಿನೇಶ ಶೆಟ್ಟಿ, ಕಾರ್ಯದರ್ಶಿ ಪ್ರವೀಣ ಬನ್ಸಾಲಿ, ಶಿವಪ್ರಸಾದ ಲಕ್ಕಮನಹಳ್ಳಿ, ಭುಜಬಲ್ ಮಾಲಗತ್ತಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.