ಬೀದರ್: ಭಾರತದ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿದು ಹೊಸ ವಿಕ್ರಮ ಸಾಧಿಸಿದ್ದಕ್ಕೆ ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದ ಶ್ರಮಜೀವಿ ವಸತಿ ಸಹಿತ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳು ಸಂಭ್ರಮಾಚರಿಸಿದರು.
ಭಾರತ ಧ್ವಜ ಹಿಡಿದು ಜಯ ಘೋಷ ಹಾಕಿದರು. ಪರಸ್ಪರ ಸಿಹಿ ತಿನ್ನಿಸಿ ಸಂತೋಷ ಹಂಚಿಕೊಂಡರು.
ಚಂದ್ರಯಾನ 3 ಯೋಜನೆ ಯಶಸ್ವಿಯಾಗಿದೆ. ಭಾರತ ಚಂದ್ರನ ದಕ್ಷಿಣ ಧ್ರುವವನ್ನು ತಲುಪಿದ ವಿಶ್ವದ ಮೊದಲ ರಾಷ್ಟ್ರವೆಂಬ ಗೌರವಕ್ಕೆ ಪಾತ್ರವಾಗಿದೆ. ಚಂದ್ರನ ಮೇಲೆ ರಾಷ್ಟ್ರಧ್ವಜ ಹಾರಾಡಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಸಂಗತಿ. ಇಸ್ರೊ ವಿಜ್ಞಾನಿಗಳ ಶ್ರಮ ಶ್ಲಾಘನೀಯವಾಗಿದೆ ಎಂದು ಶಾಲೆಯ ಅಧ್ಯಕ್ಷ ವೆಂಕಟರಾವ್ ಮಾಯಿಂದೆ ಹೇಳಿದರು.
ಶಾಲೆಯ ಕಾರ್ಯದರ್ಶಿ ಶರ್ಮಿಲಾ ಮಾಯಿಂದೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.