ಬೇಲೂರು: ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿ ತಾಲೂಕಿನ ವಾಟೇಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಗುರುವಾರ ಬೆಳಗ್ಗೆ ಕೆಲಕಾಲ ಬೇಲೂರಿನಿಂದ-ಸಕಲೇಶಪುರಕ್ಕೆ ತೆರಳುತಿದ್ದ ಬಸ್ ತಡೆದು ಪ್ರತಿಭಟಿಸಿ ತೆರಳಿದರು.
ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಬಸ್ ತಡೆದು ಮಾತನಾಡಿದ ನಾರ್ವೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ್, ತಾಲೂಕಿನ ವಿವಿಧ ಗ್ರಾಮಗಳಿಂದ ಬೇಲೂರು-ಸಕಲೇಶಪುಕ್ಕೆ ಸಾಕಷ್ಟು ಗ್ರಾಮಗಳಿಂದ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳುತ್ತಾರೆ. ಆದರೆ ಈ ಭಾಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ಶಾಲೆಯಲ್ಲಿನ ಪಾಠ ಪ್ರವಚನಗಳಿಂದ ವಂಚಿತರಾಗುತಿದ್ದಾರೆ. ಇದಕ್ಕೆಲ್ಲ ಪ್ರಮುಖವಾಗಿ ಬೇಲೂರು ಮತ್ತು ಸಕಲೆಶಪುರ ಬಸ್ ಡಿಪೋಗಳ ವ್ಯವಸ್ಥಾಪಕರೆ ಕಾರಣರಾಗಿದ್ದಾರೆ. ಇವರು ಸರಿಯಾದ ಸಮಯಕ್ಕೆ ಬಸ್‌ಗಳನ್ನು ಕಳುಹಿಸಿದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ಆದರೆ ಅವರು ಮನಸ್ಸಿಗೆ ಬಂದಂತೆ ಸಮಯವಿಲ್ಲದೆ ಬಸ್‌ಗಳನ್ನು ಬಿಡುವುದರಿಂದ ವಿದ್ಯಾರ್ಥಿಗಳಿಗೆ ಅನಾನೂಕೂಲವಾಗುತ್ತಿದೆ. ಆದ್ದರಿಂದ ಡಿಪೋ ವ್ಯವಸ್ಥಾಪಕರು ಈ ಬಗ್ಗೆ ಗಮನ ಹರಿಸಿ ಸರಿಯಾದ ಸಮಯಕ್ಕೆ ಬಸ್‌ಗಳನ್ನು ಬಿಟ್ಟು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಮುಂದಾಗಬೇಕು. ಇಲ್ಲದಿದ್ದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪೋಗಳ ಮುಂದೆ ಪ್ರತಿಭಟನೆ ನಡೆಸ ಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ವಾಟೇಹಳ್ಳಿ ಅಕ್ಕಪಕ್ಕದ ಗ್ರಾಮಗಳ ವಿದ್ಯಾರ್ಥಿಗಳಿದ್ದರು.