ಚಿತ್ರದುರ್ಗ: ವೇಳಾಪಟ್ಟಿಯಲ್ಲಿ ಸೇರಿಸುವ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ ವಾರಕ್ಕೆ ಒಂದು ದಿನ ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳನ್ನು
ಏರ್ಪಡಿಸ ಬೇಕೆಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಪ್ರಧಾನ ಕಾರ‌್ಯದರ್ಶಿ ಬಿ.ಎ.ಲಿಂಗಾರೆಡ್ಡಿ ಹೇಳಿದರು.
ಶಿವಮೊಗ್ಗದ ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ,ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಆಶ್ರಯದಲ್ಲಿ ನಗ ರದ ಸಂಸ್ಥೆ ಕಾರ‌್ಯಾಲಯದಲ್ಲಿ ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಸ್ಕೌಟ್ಸ್ ಮತ್ತು ಗೈಡ್ಸ್,ರೋವರ್ಸ್,ರೇಂಜರ್ಸ್ ಲೀಡರ್‌ಗಳಿಗೆ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಮಾಹಿತಿ,ತರಬೇತಿ ಕಾರ‌್ಯಾಗಾರದಲ್ಲಿ ಮಾತನಾಡಿದ ಅವರು,ಶಾಲಾ,ಕಾಲೇಜುಗಳಲ್ಲಿ ಆಟೋಟಗಳು,ಸಾಂಸ್ಕೃತಿಕ ಮೊದಲಾದ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು.
ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು,ಸಮಯ ಪ್ರಜ್ಞೆ,ನಾಯಕತ್ವದ ಗುಣಗಳನ್ನು ಬೆಳೆಸಲು ಹಾಗೂ ಅವರನ್ನು ಉತ್ತ ಮ ಪ್ರಜೆಗಳನ್ನಾಗಿ ರೂಪಿಸಲು ಸಹಕಾರಿಯಾಗಿವೆ. ಶಾಲಾ,ಕಾಲೇಜುಗಳಲ್ಲಿ ಪೂರಕ ಕಾರ‌್ಯಕ್ರಮಗಳನ್ನು ಏರ್ಪಡಿಸುವುದು ನಮ್ಮ ಜವಾಬ್ದಾರಿ ಕೂಡ ಆಗಿದೆ ಎಂದರು.
ಸರ್ಕಾರಿ ಕಲಾ ಕಾಲೇಜು ಪ್ರಾಚಾರ‌್ಯ ತಿಪ್ಪೇರುದ್ರಪ್ಪ ಅವರು ಮಾತನಾಡಿ,ಜಿಲ್ಲೆಯ ಸರ್ಕಾರಿ,ಅನುದಾನಿತ ಹಾಗೂ ಅನುದಾನ ರಹಿತ 50 ಕಾ ಲೇಜುಗಳಲ್ಲಿ ರೋವರ್ಸ್ ಮತ್ತು ರೆಂಜರ್ಸ್ ಘಟಕಗಳನ್ನು ಸ್ಥಾಪಿಸುವ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆ ಪೂರಕ ಚಟುವಟಿಕೆ ಗಳನ್ನು ಹಮ್ಮಿಕೊಳ್ಳಬೇಕೆಂದರು.
ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಚಾರ‌್ಯ ಪ್ರೊ.ಎಂ.ಎನ್.ರವಿಕಾಂತ್ ಅವರು ಮಾತನಾಡಿದರು. ಸಂಸ್ಥೆಯ ಜಿಲ್ಲಾ ಸ್ಥಾನಿಕ ಆಯುಕ್ತ ಅನಂತರೆಡ್ಡಿ ಸ್ವಾಗತಿಸಿದರು. ಜಿಲ್ಲಾ ರೋವರ್ ನೋಡಲ್ ಅಧಿಕಾರಿ ಎಚ್.ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೈಡ್ಸ್ ಕಮಿಷನರ್ ಸವಿತಾ ಶಿವ ಕುಮಾರ್,ಸಂಸ್ಥೆ ಉಪಾಧ್ಯಕ್ಷೆ ಜಯಶ್ರೀಶಾ,ಜಂಟಿ ಕಾರ‌್ಯದರ್ಶಿ ಡಾ.ರಹಮತ್‌ಉಲ್ಲಾ,ಜಿಲ್ಲಾ ಸಂಘಟನಾ ಶಿಕ್ಷಕ ರವಿ,ಜಿಲ್ಲಾ ಸಂಘಟಕ ಮಲ್ಲೇಶಪ್ಪ ಇತರರು ಇದ್ದರು.