ಮದ್ದೂರು ಕಡಿಲುವಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕನ್ನಡ ಭಾಷ ಶಿಕ್ಷಕ ಕೆ.ಆರ್.ಗಣೇಶ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಶಾಲೆಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ಬೊಮ್ಮರಾಜು, ನಾರಾಯಣಸ್ವಾಮಿ, ಕವಿತಾ, ನಾಜಿರಭಾನು, ಅನಿತಾರೆಡ್ಡಿ, ಮಧುಸೂದನ್ ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿರಲಿ

ಮದ್ದೂರು: ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲವಿದ್ದರೆ ಸಾಧನೆಯ ಗುರಿ ಮುಟ್ಟುವುದು ಸುಲಭ. ಹೀಗಾಗಿ ವಿದ್ಯಾರ್ಥಿಗಳು ಕಷ್ಟಪಟ್ಟು ವ್ಯಾಸಂಗ ಮಾಡಿ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಕಲಿತ ಶಾಲೆ, ಊರು ಹಾಗೂ ದೇಶಕ್ಕೆ ಕೀರ್ತಿ ತರಬೇಕು ಎಂದು ಕನ್ನಡ ಭಾಷಾ ಶಿಕ್ಷಕ ಕೆ.ಆರ್.ಗಣೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಡಿಲುವಾಗಿಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. 11 ವರ್ಷಗಳ ಕಾಲ ಈ ಶಾಲೆಯಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸಿ, ಬೇರೆಡೆಗೆ ವರ್ಗಾವಣೆಯಾಗಿದ್ದರೂ ಈ ಶಾಲೆಯ ನೆನಪು ನನ್ನನ್ನು ಸದಾ ಕಾಡುತ್ತಿರುತ್ತದೆ. ಇಲ್ಲಿಯ ಮುಖ್ಯಶಿಕ್ಷಕರು, ಸಹಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೋರಿಸಿದ ಪ್ರೀತಿ, ವಿಶ್ವಾಸವನ್ನು ಎಂದಿಗೂ ಮರೆಯುವುದಿಲ್ಲ ಎಂದರು.

ಮುಖ್ಯಶಿಕ್ಷಕ ಬೊಮ್ಮರಾಜು, ಶಿಕ್ಷಕರಾದ ನಾರಾಯಣಸ್ವಾಮಿ, ಶ್ರೀನಿವಾಸಮೂರ್ತಿ, ಎಂ.ಎಸ್.ಕವಿತಾ, ನಾಜಿರಭಾನು, ಅನಿತಾರೆಡ್ಡಿ, ಮಧುಸೂದನ್ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳು ಇದ್ದರು.