ಜಿಲ್ಲೆ

ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಶನಿವಾರಸಂತೆ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಮಡಿಕೇರಿ, ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆ ವತಿಯಿಂದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಸಪ್ತಾಹ-2025 ಅಂಗವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಲೋಕಾಯುಕ್ತ ಡಿವೈಎಸ್‌ಪಿ ದಿನಕರ್ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕಿ ವೀಣಾ ನಾಯಕ್ ನೇತೃತ್ವದಲ್ಲಿ ಕಾವೇರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾರತಿ ವಿದ್ಯಾಸಂಸ್ಥೆಯಿಂದ ಪ್ರಾರಂಭಗೊಂಡು ಮುಖ್ಯರಸ್ತೆ ಮೂಲಕವಾಗಿ ಪಟ್ಟಣದ ಕೆಆರ್‌ಸಿ ವೃತ್ತದವರೆಗೆ ಜಾಥಾ ನಡೆಸಿದರು. ಸಾರ್ವಜನಿಕರಲ್ಲಿ ಭ್ರಷ್ಟಾಚಾರದ ವಿರುದ್ಧ ಅರಿವು ಮೂಡಿಸಿದರು. ನಂತರ ಲೋಕಾಯುಕ್ತ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರದ ಬಗ್ಗೆ ಮಾಹಿತಿ ನೀಡಿದರು. ಶನಿವಾರಸಂತೆ ಪೊಲೀಸ್ ಠಾಣೆ ಸಿಬ್ಬಂದಿ ಪಾಲ್ಗೊಂಡಿದ್ದರು.