ಸುಂಟಿಕೊಪ್ಪ: ವಿಶ್ವ ಪರಿಸರ ದಿನದ ಅಂಗವಾಗಿ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆ ವತಿಯಿಂದ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.
ಹಸಿರು, ಹಳದಿ, ಕೆಂಪು, ನೀಲಿ ಬಣ್ಣದ ದಿರಿಸು ಧರಿಸಿದ್ದ 4 ತಂಡದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಕಾಲೇಜಿನ ಮಕ್ಕಳು ಪರಿಸರ ಘೋಷಣೆಯ ಭಿತ್ತಿ ಪತ್ರಗಳನ್ನು ಹಿಡಿದು ಶಾಲಾ ಬ್ಯಾಂಡ್‌ಸೆಟ್‌ನೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ನೆಲ, ಜಲ, ಪರಿಸರದ ಬಗ್ಗೆ ಘೋಷಣೆಗಳನ್ನು ಕೂಗುತ್ತ ಪಟ್ಟಣದ ಜನತೆಯಲ್ಲಿ ಜಾಗೃತಿ ಮೂಡಿಸಿದರು
ಆಂಗ್ಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೇಲ್ವರಾಜ್, ಶಿಕ್ಷಕರು ಪದವಿ ಕಾಲೇಜಿನ ಉಪನ್ಯಾಸಕರು ಇದ್ದರು.