ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ಜಾಣ್ಮೆಯಿಂದಲೇ ಆಟೋಟಗಳಲ್ಲಿ ಪಾಲ್ಗೊಂಡು ಅಂದುಕೊAಡಿರುವ ಗುರಿ ತಲುಪಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ತಿಳಿಸಿದರು.
ತಾಲೂಕಿನ ಕೆ.ಆರ್.ಪೇಟೆ ಗ್ರಾಮದ ಎಂಇಎಸ್ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಜಿಲ್ಲಾಡ ಳಿತ, ಗ್ರಾಮ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಎಂಇಎಸ್ ಕಮಲಾಬಾಯಿ ನಾಗರಾಜಸಿಂಗ್ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಕ್ರೀಡಾಕೂಟವನ್ನುz್ದೆÃಶಿಸಿ ಮಾತನಾಡಿದರು.
ಪ್ರತಿದಿನ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ದೈಹಿಕವಾಗಿ ಆರೋಗ್ಯವಾಗಿರಲು ಸಾಧ್ಯ. ಹೀಗಾಗಿ ಮಕ್ಕಳು ಶಾಲೆಗಳಲ್ಲಿ ನಡೆಯುವ ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಅನಾವರಣಗೊಳಿಸಬೇಕು. ಜೊತೆಗೆ ದೈಹಿಕ ಶಿಕ್ಷಕರ ತರಬೇತಿಯಿಂದ ಉನ್ನತಿ ಹೊಂದಬೇಕು ಎಂದರು.
ಅನೇಕ ಹೋಬಳಿಗಳಿಂದ ಆಯ್ಕೆಯಾದ ವಿದ್ಯಾರ್ಥಿಗಳು ತಾಲೂಕು ಮಟ್ಟದಲ್ಲಿ ಭಾಗವಹಿಸಿದ್ದಿರಿ. ಇಲ್ಲಿಂದ ಆಯ್ಕೆಯಾದ ಮಕ್ಕಳು ಜಿಲ್ಲಾ ಮಟ್ಟದಿಂದ ರಾಜ್ಯ ಹಾಗೂ ರಾಷ್ಟಮಟ್ಟದಲ್ಲಿ ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಬಹುದು. ಹಾಗಾಗಿ ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂಇಎಸ್ ಸಂಸ್ಥೆ ಉಪಾಧ್ಯಕ್ಷೆ ರಾಧಾ ಸುಂದರೇಶ್, ಶಿಕ್ಷಣವು ಸಮಾಜದ ಅರಿವು, ತಿಳಿವಳಿಕೆಯನ್ನು ಮೂಡಿಸುವ ಸಾಧನ. ಕ್ರೀಡಾಲೋಕ ಅಡಗಿರುವ ಪ್ರತಿಭೆಯನ್ನು ಹೊರಹಾಕುವ ಸಾಧನ. ಹೀಗಾಗಿ ಸೋಲು, ಗೆಲುವಿಗೆ ಬಗ್ಗೆ ತಲೆಕೆಡಿಸಿಕೊಳ್ಳದೆ ಭಾಗವಹಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ಎAಇಎಸ್. ಗೌರವ ಕಾರ್ಯದರ್ಶಿ ಡಾ. ಡಿ.ಎಲ್.ವಿಜಯ್‌ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡಾ ಜಗತ್ತಿಗೆ ಕಾಲಿಡಲು ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟಗಳು ಸಹಕಾರಿ. ಹೀಗಾಗಿ ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮದಿಂದ ಸದ್ಗುಣಗಳನ್ನು ಅಳವಡಿಸಿಕೊಂಡು ಶಿಸ್ತಿನಿಂದ ಕ್ರೀಡಾಕ್ಷೇತ್ರದಲ್ಲಿ ತಲ್ಲೀನರಾಗಿರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಕೆ.ಆರ್.ಪೇಟೆ ಗ್ರಾಪಂ ಅಧ್ಯಕ್ಷೆ ಮಮತಾ ರಮೇಶ್, ಗ್ರಾಮದ ವಿಶಾಲವಾದ ಆವರಣ ಹಾಗೂ ಪ್ರಕೃತಿ ಮಡಿಲಿನಲ್ಲಿ ಸ್ಪರ್ಧೆ ಆಯೋಜಿಸಿರುವುದರಿಂದ ಮಕ್ಕಳಿಗೆ ಉತ್ಸಾಹ, ಉಲ್ಲಾಸ ಉಲ್ಭಣಗೊಂಡಿರುತ್ತದೆ. ಪ್ರತಿಯೊಬ್ಬರು ಶಿಸ್ತಿನಿಂದ ಆಟವಾಡಬೇಕು. ತೀರ್ಪುಗಾರರ ಆದೇಶವನ್ನು ಪಾಲಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಂಇಎಸ್ ಅಧ್ಯಕ್ಷ ಕೇಶವಮೂರ್ತಿ, ಸಹ ಕಾರ್ಯದರ್ಶಿ ಎಸ್.ನಾರಾಯಣ ಭಟ್, ಬಿಇಒ ಕಚೇರಿ ಸಂಯೋಜಕ ಕೃಷ್ಣಮೂರ್ತಿರಾಜ್ ಅರಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್‌ಕುಮಾರ್, ಕಾರ್ಯದರ್ಶಿ ಪರಮೇಶ್, ತಾಲೂಕು ಅಧ್ಯಕ್ಷ ಅಜ್ಜಯ್ಯ, ಕಾರ್ಯದರ್ಶಿ ರವಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಲೋಬೋ ಉಪಸ್ಥಿತರಿದ್ದರು.