ಜಿಲ್ಲೆ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಸಲಹೆ

ಚಾಮರಾಜನಗರ : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಅವರ ಭವಿಷ್ಯ ರೂಪಿಸಿಸುವುದು ಶಿಕ್ಷಕರ ಕರ್ತವ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ತಿಳಿಸಿದರು.


ನಗರದ ಡಯಟ್ ಸಭಾಂಗಣದಲ್ಲಿ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಮತ್ತು ತಾಲೂಕು ಘಟಕ ವತಿಯಿಂದ ಶನಿವಾರ ಆಯೋಜಿಸಿದ್ದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.


ಕೋವಿಡ್‌ನಿಂದ ಎರಡು ವರ್ಷ ಪಾಠ ಸ್ಥಗಿತಗೊಂಡಿತ್ತು. ನಂತರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಲಿತಾಂಶ ಬಂದಿದೆ. ಶೇ.92.1 ರಷ್ಟು ವಿದ್ಯಾರ್ಥಿಗಳು ಉತ್ತಮ ದರ್ಜೆಯಲ್ಲಿ ಉತ್ತೀಣರಾಗುವ ಮೂಲಕ ಶಿಕ್ಷಕರಿಗೆ ಕೀರ್ತಿ ತಂದಿದ್ದಾರೆ. ಈ ಬಾರಿ ಇನ್ನು ಹೆಚ್ಚಿನ ಲಿಶಾಂಶವನ್ನು ನಿಮ್ಮಲ್ಲಿ ನಿರೀಕ್ಷೆ ಮಾಡುತ್ತೇವೆ ಎಂದರು.


ಡಯಟ್ ಶಾಲೆಯ ಪ್ರಾಂಶುಪಾಲ ಎಚ್.ಪಿ.ಪಾಂಡು ಮಾತನಾಡಿ, ಪ್ರೌಢಶಾಲೆಯ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಶಿಕ್ಷಕ ವೃತ್ತಿ ಪವಿತ್ರವಾದದ್ದು ಎಂದರು.


ಇದೇ ವೇಳೆ ಜಿಲ್ಲೆಯ 66ಕ್ಕೂ ಹೆಚ್ಚು ಶಿಕ್ಷಕರನ್ನು ಗುರುತಿಸಿ ಸಂಘದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲಪುರ ನಂದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಬಿಆರ್‌ಸಿ ರಾಜು, ನಿವೃತ್ತ ಪ್ರಾಂಶುಪಾಲ ಬಂಗಾರ ನಾಯಕ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ವೀರಭದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಿರಣ್ ರಾಜ್, ತಾಲೂಕು ಅಧ್ಯಕ್ಷ ಮಂಜುನಾಥ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನೇಮಿರಾಜ್, ಉಪಾಧ್ಯಕ್ಷ ನಾಗರಾಜು, ಖಜಾಂಚಿ ನಿರ್ಮಲಾ, ರಾಜ್ಯ ಪರಿಷತ್ ಸದಸ್ಯ ಮಲ್ಲಶೆಟ್ಟಿ, ನಿರ್ದೇಶಕರಾದ ಸಿದ್ದರಾಜು, ಮಾದೇಗೌಡ, ಗಜೇಂದ್ರ, ಮಲ್ಲೇಶ, ಮಹೇಶ್, ತ್ಯಾಗರಾಜಮೂರ್ತಿ ಇತರರಿದ್ದರು.