ಅರಕಲಗೂಡು: ತಾಲೂಕಿನಲ್ಲಿ ಶುಕ್ರವಾರ ಆರಂಭವಾದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಒಟ್ಟು 9 ಕೇಂದ್ರಗಳಲ್ಲಿ 22,884 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 22 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಹಾಜರಾದ ವಿದ್ಯಾರ್ಥಿಗಳಿಗೆ ತಹಸೀಲ್ದಾರ್ ಸೌಮ್ಯಾ, ಬಿಇಒ ನಾರಾಯಣ್ ಅವರು ಗುಲಾಬಿ ಹೂ ನೀಡಿ ಶುಭ ಹಾರೈಸಿದರು.
ವಿದ್ಯಾರ್ಥಿಗಳು ಯಾವುದೇ ರೀತಿಯ ಭಯ ಪಡದೆ ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಬೇಕು ಎಂದು ಧೈರ್ಯ ತುಂಬಿದರು.