ಜಿಲ್ಲೆ

ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

ಚಾಮರಾಜನಗರ: ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಹುಟ್ಟುಹಬ್ಬದ ಪ್ರಯುಕ್ತ ಚಾಮರಾಜನಗರದ 9ನೇ ವಾರ್ಡ್ ನಲ್ಲಿರುವ ಸರ್ಕಾರಿ ಶಾಲೆಯ ಮಕ್ಕಳಿಗೆ ಕಾಂಗ್ರೆಸ್ ಯುವ ಮುಖಂಡ ಸೈಯ್ಯದ್ ಮುಸೈಯೀಬ್ ನೋಟ್ ಬುಕ್ ವಿತರಣೆ ಮಾಡಿದರು.

ಈ ವೇಳೆ ಸೈಯ್ಯದ್ ಮುಸೈಯೀಬ್ ಮಾತನಾಡಿ, ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾದ ಗಣೇಶ್ ಪ್ರಸಾದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಲಾಗಿದೆ. ಭಗವಂತ ಶಾಸಕರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಉನ್ನತ ಹುದ್ದೆ ಕರುಣಿಸಲಿ ಎಂದು ಅಶಿಸಿದರು.

ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಕೆರೆಹಳ್ಳಿ ನವೀನ್, ಅನಂತ್ ಇತರರು ಭಾಗವಹಿಸಿದ್ದರು