ಜಿಲ್ಲೆ

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಪಿರಿಯಾಪಟ್ಟಣ: ಸುಸ್ಥಿರ ಸಮಾಜ ನಿರ್ಮಾಣ ಮಾಡುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಪತ್ರಿಕೆಗೆ ನೂರಾರು ವರ್ಷಗಳ ಇತಿಹಾಸವಿದ್ದು ತನ್ನದೇ ಆದ ಓದುಗರ ಬಳಗವನ್ನು ಸೃಷ್ಟಿಸಿಕೊಂಡಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಟಿವಿ, ಮೊಬೈಲ್, ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಪತ್ರಿಕೆಗಳನ್ನು ಕೊಂಡು ಓದುವವರ ಸಂಖ್ಯೆ ಕ್ಷೀಣಿಸುತ್ತಿರುವುದು ಬೇಸರದ ಸಂಗತಿಯಾಗಿದೆ ಎಂದರು.

ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ಕೆ.ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಕರುಣಾಕರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ರವಿಚಂದ್ರ ಮಾತನಾಡಿದರು.

ಇತ್ತೀಚೆಗೆ ಪತ್ರಿಕೋದ್ಯಮದ ವಿವಿಧ ವಿಭಾಗಗಳಲ್ಲಿ ವಿಜಯವಾಣಿ ಪತ್ರಿಕೆ ಸ್ಥಾನಿಕ ಸಂಪಾದಕ ಎಂ.ಆರ್.ಸತ್ಯನಾರಾಯಣ, ಬೆಟ್ಟದಪುರ ವಿಜಯವಾಣಿ ಗ್ರಾಮಾಂತರ ವರದಿಗಾರ ಸಿ.ಜಿ.ಪುನೀತ್, ಹಿರಿಯ ವರದಿಗಾರ ರವಿಕುಮಾರ್, ವರದಿಗಾರ ಕೆ.ಪಿ.ಪವನ್ ಕುಮಾರ್, ಬಿ.ಆರ್.ಗಣೇಶ್ ಅವರನ್ನು ಅಭಿನಂದಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ತಾಲೂಕಿನ ಪತ್ರಕರ್ತರ ಮಕ್ಕಳನ್ನು ಗೌರವಿಸಲಾಯಿತು.

ಜಿಲ್ಲಾ ಪತ್ರಕರ್ತರ ಸಂಘದ ಗ್ರಾಮಾಂತರ ಕಾರ್ಯದರ್ಶಿ ದಾ.ರಾ ಮಹೇಶ್, ನಿರ್ದೇಶಕರಾದ ಸಿ.ಎನ್.ವಿಜಯ್, ಹುಲ್ಲಹಳ್ಳಿ ಮೋಹನ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಮಲ್ಲೇಶ್, ಉಪಾಧ್ಯಕ್ಷ ಬಿ.ಎಂ.ಸ್ವಾಮಿ, ಕಾರ್ಯದರ್ಶಿ ಪಿ.ಎನ್.ದೇವೇಗೌಡ , ಸದಸ್ಯರಾದ ನವೀನ್ ಕುಮಾರ್, ಮುಕುಂದ, ರಾಮೇಗೌಡ, ಲೋಕೇಶ್, ಅಶ್ವತ್ಥ್, ಸತೀಶ್ ಆರಾಧ್ಯ, ಇಂತಿಯಾಜ್ ಅಹಮದ್, ಬಿ.ಎಸ್.ಪ್ರಸನ್ನಕುಮಾರ್, ಕೆ.ಪಿ.ವೆಂಕಟೇಶ, ಎಚ್.ಕೆ.ಮಹೇಶ್, ಕೆ.ಆರ್.ಮಹೇಶ್, ಪಿ.ಡಿ.ಪ್ರಸನ್ನ, ಶರತ್ ಕುಮಾರ್, ವಿನಯ್ ಕುಮಾರ್, ಶಿವಣ್ಣ, ಅಶೋಕ, ಸದಾಶಿವ ಹಾಜರಿದ್ದರು.