ಜಿಲ್ಲೆ

ವಿದ್ಯಾರ್ಥಿಗಳಿಗೆ ಬಸ್ ಪಾಸ್ ತ್ವರಿತ ನೀಡಿ

ಹೂವಿನಹಡಗಲಿ: ವಿದ್ಯಾರ್ಥಿಗಳಿಗೆ ಬಸ್‌ಪಾಸ್ ನೀಡುವಂತೆ ಒತ್ತಾಯಿಸಿ ಪಟ್ಟಣದ ಸಾರಿಗೆ ಘಟಕದ ವ್ಯವಸ್ಥಾಪಕ ವೆಂಕಟಾಚಲಪತಿಗೆ ಎಬಿವಿಪಿ ತಾಲೂಕು ಘಟಕದಿಂದ ಸೋಮವಾರ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಸಂಚಾಲಕ ಧನುಷ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದಿಂದ ತಾಲೂಕು ಕೇಂದ್ರದಲ್ಲಿರುವ ವಿದ್ಯಾಲಯಗಳಿಗೆ ನಿತ್ಯ ಅಭ್ಯಾಸ ಮಾಡಲು ಸಾವಿರಾರು ವಿದ್ಯಾರ್ಥಿಗಳು ಆಗಮಿಸುತ್ತಾರೆ. ವಿದ್ಯಾರ್ಥಿಗಳು ಕರ್ನಾಟಕ ಒನ್‌ನಲ್ಲಿ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಒಂದು ತಿಂಗಳು ಕಳೆದರೂ ಪಾಸ್ ನೀಡಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯಾಗುತ್ತಿದೆ. ಕೂಡಲೇ ಬಸ್‌ಪಾಸ್ ನೀಡಬೇಕು ಎಂದು ಒತ್ತಾಯಿಸಿದರು. ಸಂಚಾರ ನಿಯಂತ್ರಕ ವಿಜಯ ಕುಮಾರ್, ಎಬಿವಿಪಿ ಸದಸ್ಯರಾದ ಮಾಲತೇಶ್, ನಿಂಗರಾಜ, ಅಭಿಷೇಕ್, ರಮೇಶ್ ಇತರರಿದ್ದರು.