ಸುಂಟಿಕೊಪ್ಪ: ಇಲ್ಲಿನ ಸಂತಮೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕೊಡಗು ಜಿಲ್ಲಾ ಘಟಕದಿಂದ 2022-23ನೇ ಸಾಲಿನ ಶೈಕ್ಷಣಿಕ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಬುಧವಾರ ಆಯೋಜಿಸಲಾಗಿತ್ತು.
ವಿಧಾನಪರಿಷತ್ ಸದಸ್ಯ ಎಸ್.ಎಲ್.ಬೋಜೆಗೌಡ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಶಿಸ್ತುಬದ್ಧವಾಗಿ ಗುಣಮಟ್ಟದ ಶಿಕ್ಷಣವನ್ನು ಕಲಿಸುವ ಕಾಯಕವನ್ನು ಪ್ರತಿಯೊಬ್ಬ ಶಿಕ್ಷಕರೂ ಮೈಗೂಡಿಸಿಕೊಳ್ಳಬೇಕು. ಅಧಿಕಾರಿಗಳು ಶಿಕ್ಷಕರ ಸ್ನೇಹಿಯಾಗಿ ಕೆಲಸ ಮಾಡುವಂತೆ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಮಾತನಾಡಿ, ಶಿಕ್ಷಕರ ಹಿತ ಕಾಪಾಡುವಲ್ಲಿ ಸಂಘಟಿತ ಹೋರಾಟ ನಡೆಸುತ್ತೇವೆ. ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮುಡಿತ್ತಾಯ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಸಂಘದ ಸಹಕಾರ್ಯದರ್ಶಿ ಎಚ್.ಎನ್.ಚೇತನ, ಕೂಡಿಗೆ ಡಯಟ್‌ನ ಮಲ್ಲೇಶಪ್ಪ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳನಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಕೊಡಗು ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಪಿಲಿಫ್‌ವಾಸ್, ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ಅಧ್ಯಕ್ಷ ಪ್ರಭುಕುಮಾರ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ.ಕುಮಾರ್, ಸಂತ ಮೇರಿ ಆಂಗ್ಲ ಶಾಲೆ ಮುಖ್ಯೋಪಾಧ್ಯಾಯ ಸೆಲ್ವರಾಜ್, ಸೋಮವಾರಪೇಟೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಎಂ.ಹೇಮಂತ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎ.ಧರ್ಮಪ್ಪ, ವಿರಾಜಪೇಟೆ ತಾಲೂಕು ಅಧ್ಯಕ್ಷ ಬಿ.ಪಿ.ಉತ್ತಪ್ಪ ಇತರರು ಇದ್ದರು.
ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯಕ್ರಮದೊಂದಿ ಶಿಕ್ಷಕರಿಗೆ ಮೌಲ್ಯಮಾಪನ ಕಾರ್ಯಾಗಾರ ನಡೆಯಿತು.