ಜಿಲ್ಲೆ

ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ

ಬೀದರ್: ಚಂದ್ರಯಾನ 3 ಯಶಸ್ವಿಯಾದ ಪ್ರಯುಕ್ತ ಇಲ್ಲಿಯ ಸ್ಪರ್ಧಾ ಸಂಕಲ್ಪ ಅಕಾಡೆಮಿಯಲ್ಲಿ ಸಂಭ್ರಮ ಆಚರಿಸಲಾಯಿತು.
ನ್ಯೂ ಮದರ್ ತೆರೆಸಾ ನಗರ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕಲ್ಯಾಣ ಭಾರತಿ ಕಲೆ, ಸಾಹಿತ್ಯ ಹಾಗೂ ಸಾಂಸ್ಕøತಿಕ ಟ್ರಸ್ಟ್ ಮತ್ತು ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ವಿದ್ಯಾರ್ಥಿಗಳು ಭಾರತದ ಧ್ವಜ ಹಿಡಿದು ಜಯ ಘೋಷ ಕೂಗಿದರು.
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್ ಮಾತನಾಡಿ, ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿರುವುದು ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದರು.
ವಿಜ್ಞಾನಿಗಳ ಅವಿರತ ಶ್ರಮದ ಫಲವಾಗಿ ಚಂದ್ರಯಾನ 3 ಯೋಜನೆ ಸಫಲವಾಗಿದೆ ಎಂದು ತಿಳಿಸಿದರು.
ಭಾರತ ಚಂದ್ರನ ದಕ್ಷಿಣ ಧ್ರುವ ತಲುಪಿದ ವಿಶ್ವದ ಏಕೈಕ ರಾಷ್ಟ್ರವೆಂಬ ಕೀರ್ತಿಗೆ ಭಾಜನವಾಗಿದೆ ಎಂದು ಡಾ. ಸಿ. ಆನಂದರಾವ್, ವಿಜ್ಞಾನ ಶಿಕ್ಷಕ ಸಂಜೀವಕುಮಾರ ಸ್ವಾಮಿ ಹೇಳಿದರು.
ಸ್ಪರ್ಧಾ ಸಂಕಲ್ಪ ಅಕಾಡೆಮಿಯ ಮುಖ್ಯಸ್ಥ ನಾಗೇಶ ಸ್ವಾಮಿ, ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಲಕರ್ಣಿ, ಸಾಹಿತಿ ರಮೇಶ ಬಿರಾದಾರ ಇದ್ದರು.
ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.