ಚಾಮರಾಜನಗರ: ವಿದ್ಯಾರ್ಥಿಗಳಿಗೆ ಶಿಸ್ತು, ಸಮಯ ಪ್ರಜ್ಞೆ ಬಹಳ ಮುಖ್ಯವಾಗಿದ್ದು, ಇವುಗಳನ್ನು ಗಮನದಲ್ಲಿಟ್ಟುಕೊಂಡು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಮಾ ಹೇಳಿದರು.
ತಾಲೂಕಿನ ಹೆಬ್ಬಸೂರು ಗ್ರಾಮದ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ಅವಧಿಯಲ್ಲಿ ಬಹಳಷ್ಟು ಅವಕಾಶಗಳು ಸಿಗುತ್ತದೆ. ಸಿಗುವ ಅವಕಾಶವನ್ನು ಶ್ರದ್ಧೆಯಿಂದ ಬಳಸಿಕೊಂಡು, ಚೆನ್ನಾಗಿ ವಿದ್ಯಾಭ್ಯಾಸ ಪಡೆದು ಪಾಲಕರಿಗೆ ಮತ್ತು ಶಿಕ್ಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಹೇಳಿದರು.
ವಿದ್ಯಾರ್ಥಿನಿ ಎನ್.ಮಹಾಲಕ್ಷ್ಮಿ ಮಾತನಾಡಿ, ಸೇವಾ ಭಾರತಿ ಶಾಲೆಯಲ್ಲಿ ವಿಧ್ಯಾಭ್ಯಾಸದ ತೆಗೆ ಸಂಸ್ಕೃತಿ, ಸಂಸ್ಕಾರವನ್ನು ಕಲಿತಿದ್ದೇನೆ. ಮುಖ್ಯವಾಗಿ ಶಾಲೆಯ ವಾತಾವರಣ ಹಾಗೂ ಶಿಕ್ಷಕರು ಪಾಠದ ತೆಗೆ ಹೇಳುವಂತಹ ಸ್ಫೂರ್ತಿದಾಯಕ ಮಾತುಗಳನ್ನು ಕೇಳುವುದು ಬಹಳ ಇಷ್ಟವಾಗಿತ್ತು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಯಶಸ್ವಿನಿ, ಮಹೇಶ್ವರಿ, ಗೀತಾ, ವರಲಕ್ಷ್ಮಿ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.