ರಾಯಚೂರಿನ ಹಮದರ್ದ್ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಭಾರತ ಸೇವಾದಳ ಕಾರ್ಯಚಟುವಟಿಕೆ ಉದ್ಘಾಟನೆ ಸಮಾರಂಭವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಮಾಂಜಿನೇಯ ಪಂ.ತಾರಾನಾಥರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಉದ್ಘಾಟಿಸಿದರು. ಆಡಳಿತ ಮಂಡಳಿ ಕಾರ್ಯದರ್ಶಿ ಶರತಕುಮಾರ ಕಳಸ, ಭಾರತ ಸೇವಾದಳದ ವಿಭಾಗೀಯ ಸಂಘಟಕ ವಿದ್ಯಾಸಾಗರ ಚಿಣಮಗೇರಿ, ಪಿಯು ಕಾಲೇಜು ಪ್ರಾಚಾರ್ಯ ಕಾಶಪ್ಪ ಬುದ್ಧ, ಉಪ ಪ್ರಾಚಾರ್ಯ ವೆಂಕಟೇಶ, ಪ್ರಾಥಮಿಕ ಶಾಲೆ ಮುಖ್ಯಗುರು ಶರಣಬಸಪ್ಪ, ಶಿಕ್ಷಕರಾದ ಸುನಿತಾ ಪುರದ, ಬೇದಾಲ್ ಗಂಗೋತ್ರಿ ಇದ್ದರು. 
ಜಿಲ್ಲೆ

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಬೆಳೆಸಿಕೊಳ್ಳಬೇಕು

ರಾಚಯ್ಯ ಸ್ವಾಮಿ

ರಾಯಚೂರು: ವಿದ್ಯಾರ್ಥಿಗಳು ಜೀವನದಲ್ಲಿ ದೇಶಭಕ್ತಿ, ಶಿಸ್ತು ರೂಢಿಸಿಕೊಳ್ಳುವುದರ ಜತೆಗೆ ದೇಶಕ್ಕಾಗಿ ನಾವು, ಸೇವೆ ಬಾಳು ಎನ್ನುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹಮದರ್ದ್ ಶಾಲಾ ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಶರತಕುಮಾರ ಕಳಸ ಹೇಳಿದರು.
ಸ್ಥಳೀಯ ಹಮದರ್ದ್ ಶಾಲೆಯಲ್ಲಿ ಭಾರತ ಸೇವಾದಳದ ಚಟುವಟಿಕೆಗಳ ಉದ್ಘಾಟನೆ ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಬಡ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೇವೆ ಎನ್ನುವುದು ಯಾವುದೇ ಆಗಿರಬಹುದು. ಅದರಿಂದ ನಾಲ್ವರಿಗೆ ಉಪಯೋಗವಾಗುವಂತಿರಬೇಕು ಎಂದು ತಿಳಿಸಿದರು.
ಭಾರತ ಸೇವಾದಳದ ವಿಭಾಗೀಯ ಸಂಘಟಕ ವಿದ್ಯಾಸಾಗರ ಚಿಣಮಗೇರಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೇಶ ಭಕ್ತಿ, ಪ್ರೇಮ ಬೆಳೆಸುವ ನಿಟ್ಟಿನಲ್ಲಿ 1923ರಲ್ಲಿ ಭಾರತ ಸೇವಾದಳವನ್ನು ಸ್ಥಾಪಿಸಲಾಯಿತು. ವಿದ್ಯಾರ್ಥಿಗಳು ಸೇವಾದಳದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಮಾಂಜಿನೇಯ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಮುಖ್ಯಗುರು ದಾನಮ್ಮ ಸುಭಾಶ್ಚಂದ್ರ, ಸಿಆರ್‌ಪಿ ಶಿವಕುಮಾರ ಮಾತನಾಡಿದರು. ಈ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳ ಶುಲ್ಕ ಪಾವತಿಸಿದ ಶಾಲೆಯ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಯು ಕಾಲೇಜು ಪ್ರಾಚಾರ್ಯ ಕಾಶಪ್ಪ ಬುದ್ಧ, ಉಪ ಪ್ರಾಚಾರ್ಯ ವೆಂಕಟೇಶ, ಪ್ರಾಥಮಿಕ ಶಾಲೆ ಮುಖ್ಯಗುರು ಶರಣಬಸಪ್ಪ, ಶಿಕ್ಷಕರಾದ ಸುನಿತಾ ಪುರದ, ಬೇದಾಲ್ ಗಂಗೋತ್ರಿ, ಧನಲಕ್ಷ್ಮಿ, ಚಂದ್ರಶೇಖರ ಉಪಸ್ಥಿತರಿದ್ದರು.