ಚಿತ್ರದುರ್ಗ: ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ. ಆದ್ದರಿಂದ ವಿದ್ಯಾರ್ಥಿ ದಿಸೆಯಿಂದಲೇ ಹೆಚ್ಚಿನ ಕಾಳಜಿ ಮೈಗೂಡಿಸಿಕೊಳ್ಳಿ ಎಂದು ಹಿರಿಯ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀನಿವಾಸ ಹೇಳಿದರು.
ಕಂದಾಯಗಿರಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಆರೋಗ್ಯ, ಶಿಕ್ಷಣ ಇಲಾಖೆಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉತ್ತಮ ಆರೋಗ್ಯ ಸಂಪಾದಿಸಲು ಶಾಲಾ ಆವರಣದ ಸುತ್ತ ಗಿಡ-ಮರ ಬೆಳೆಸಿ. ಸ್ವಚ್ಛ ವಾತವಾರಣ ನಿರ್ಮಿಸಿಕೊಳ್ಳಿ. ಘನ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಿ. ಪ್ಲಾಸ್ಟಿಕ್ ಬದಲು ಪರಿಸರ ಸ್ನೇಹಿ ಪರಿಕರಗಳನ್ನು ಬಳಸಿ ಎಂದು ಸಲಹೆ ನೀಡಿದರು.
ಮುಖ್ಯಶಿಕ್ಷಕಿ ಗೌಸ್ ಫಯಾಜ್, ಶಿಕ್ಷಕ ಪ್ರಸಾದ್, ಸಹ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಇದ್ದರು.