ಜಿಲ್ಲೆ

ವಿದ್ಯಾರ್ಥಿಗಳು ಬಾಲ್ಯದಿಂದಲೇ ಕ್ರೀಡೆಗೆ ಒತ್ತು ನೀಡಲಿ : ಕಾವೇರಿ ಪ.ಪೂ.ಕಾಲೇಜು ಪ್ರಾಂಶುಪಾಲ ಎಚ್.ಎನ್.ದೇವರಾಜ್ ಕರೆ

ಕೊಡಗು : ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಉತ್ತೇಜನ ನೀಡುತ್ತಿದೆ ಎಂದು ಕಾವೇರಿ ಪ.ಪೂ.ಕಾಲೇಜು ಪ್ರಾಂಶುಪಾಲ ಎಚ್.ಎನ್.ದೇವರಾಜ್ ಹೇಳಿದರು.


ಶನಿವಾರಸಂತೆ ಕಾವೇರಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿರುವ ಪ್ರಸ್ತುತ ಸಾಲಿನ ಪ್ರಾಥಮಿಕ ಶಾಲಾ ಹಂತದ ವಲಯ ಮಟ್ಟದ ಕ್ರೀಡಾಕೂಟದಕ್ಕೆ ಚಾಲನೆ ನೀಡಿ ಮಾತನಾಡಿದರು.


ಶಿಕ್ಷಣ ಇಲಾಖೆ ಮತ್ತು ಸರ್ಕಾರ ಪಠ್ಯ ಹಾಗೂ ಕ್ರೀಡೆಗೆ ಸಮಾನವಾಗಿ ಆದ್ಯತೆ ನೀಡಿದೆ. ವಿದ್ಯಾರ್ಥಿಗಳು ಬಾಲ್ಯದಿಂದಲೇ ಕ್ರೀಡೆಗೆ ಹೆಚ್ಚು ಒತ್ತು ನೀಡುವ ಮೂಲಕ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರತಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು. ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ಸಿ.ಕೆ.ದಿನೇಶ್, ಕಾವೇರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಜಿ.ಎಂ.ಹೂವಯ್ಯ ಮಾತನಾಡಿದರು.


ಶನಿವಾರಸಂತೆ ವಲಯ ಕ್ರೀಡಾ ಸಮಿತಿ ಕಾರ್ಯದರ್ಶಿ ಸುನಂದಾ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ, ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಸತ್ಯವತಿ, ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್, ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಕವಿತಾ, ವಿಶ್ವನಾಥ್, ವನಿತಾ, ಪ್ರಿಯಾಂಕಾ ಇತರರು ಇದ್ದರು. ಇದೇ ವೇಳೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಲಾಯಿತು.