ಜಿಲ್ಲೆ

ವಿದ್ಯಾರ್ಥಿಗಳು ಸಿಕ್ಕ ಅವಕಾಶ ಸಮರ್ಪಕವಾಗಿ ಬಳಸಿಕೊಳ್ಳಿ: ಎಸ್ಪಿ ಮಹಮದ್ ಸುಜೀತಾ

ಹಾಸನ:ಮಕ್ಕಳು ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅದೇ ರೀತಿ ಪೋಷಕರು ಮಕ್ಕಳಿಗೆ ಒತ್ತಡ ಹಾಕದೇ ಅವರ ಆಸಕ್ತಿದಾಯ ವಿಚಾರಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೀತಾ ಕಿವಿಮಾತು ಹೇಳಿದರು.
ಜಿಲ್ಲಾ ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಗುರುಗಳು ನಮ್ಮನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ಮಾಡಿದ್ದಾರು ಅದರಿಂದಲೇ ನಾವು ಈ ಹಂತಕ್ಕೆ ಬರಲು ಕಾರಣವಾಗಿದೆ. ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುತ್ತಿರುವುದು ಸ್ವಾಗತಾರ್ಹ ಎಂದರು.
ಜೀವನದಲ್ಲಿ ಯಾರಿಂದ ಏನನ್ನು ಬೇಕಾದರೂ ಕಿತ್ತುಕೊಳ್ಳಬಹುದು, ಆದರೆ ಯಾವುದೇ ರೀತಿಯ ವಿದ್ಯೆಯನ್ನು ಕಸಿದುಕೊಳ್ಳಲು ಸಾದ್ಯವಿಲ್ಲ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣದ ಜೊತೆಗೆ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅನ್ಯರಿಗೆ ತೊಂದರೆ ನೀಡಬಾರದು. ಎಲ್ಲರೊಂದಿಗೆ ಸೌಹಾರ್ದಯುತವಾಗಿ ನಡೆಸಬೇಕು. ವಿದ್ಯಾರ್ಥಿಗಳು ದೇಶದ ಭವಿಷ್ಯದ ಆಸ್ತಿ. ಅವರು ಮುಂದಿನ ದಿನಗಳಲ್ಲಿ ಉತ್ತಮ ನಾಗರಿಕರಾಗಿ ಜೀವನ ಉಪಿಸಿಕೊಳ್ಳಬೇಕು ಎಂದು ಹೇಳಿದರು.
ಡಾ.ಭಾಗ್ಯಲಕ್ಷ್ಮಿ ಮಾತನಾಡಿ,ಬಾಬು ಜಗಜೀವನ್ ರಾಮ್ ಕ್ಷೇಮಾಭಿವೃದ್ಧಿ ಸಂಘ ಸಮುದಾಯಕ್ಕೆ ಯುವ ಪೀಳಿಗೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನೀಟ್ಟಿನಲ್ಲಿ ಮಾಡಿರುವ ಕಾರ್ಯ ಯಶಸ್ವಿಯಾಗಲಿ ಎಂದು ಹೇಳಿದರು.
ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ದೈರ್ಯ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. ಮಹಿಳೆಯರ ಜೊತೆ ಸದಾ ನಿಲ್ಲಬೇಕು ಎಂಬುದಕ್ಕೆ ಬಾಬು ಜಗಜೀವನ್ ರಾಮ್ ಸಂಘ ಮಹಿಳೆಯರಿಗೆ ಆದ್ಯತೆ ನೀಡಿರುವುದು ಸಹ ಒಂದು ಉತ್ತಮ ಕಾರ್ಯವಾಗಿದೆ ಎಂದರು.
ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಪ್ರಯತ್ನ ನಿಮ್ಮದು ಪ್ರೋತ್ಸಾಹ ನಮ್ಮದು ಎಂಬ ಘೋಷವಾಕ್ಯದೊಂದಿಗೆ ಬಾಬು ಜಗಜೀವನ್ ರಾಮ್ ಸಂಘವು ಕಾರ್ಯ ನಿರ್ವಹಿಸುತ್ತಿದ್ದು, ಈ ನಿಟ್ಟಿನಲ್ಲಿಯೇ ಸಂಘ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಇದೇ ರೀತಿಯಲ್ಲಿ ಸಮುದಾಯದ ಯುವ ಜನತೆಯನ್ನು ಸಮಾಜದ ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಮುಂದೆಯೂ ಸಹ ಕಾರ್ಯ ನಿರ್ವಹಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತ ನೌಕರರಿಗೆ ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಂಘದ ಗೌರವಾಧ್ಯಕ್ಷ ಟಿ.ಎಸ್.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಎಲ್.ಎಚ್.ಸೋಮಶೇಖರ್, ಲೆಕ್ಕಪತ್ರ ಪರಿಶೋಧಕ ಆರ್.ರಂಗರಾಜು, ಸಂಘಟನಾ ಕಾರ್ಯದರ್ಶಿ ಆರ್.ತೀರ್ಥ ಪ್ರಸಾದ್, ಬಿ.ಎಚ್‌ರಾಜು , ಯೋಗೇಶ್, ಅಶ್ವಿನಿ, ಭಾಗ್ಯ, ಪುಷ್ಪಲತ, ಸ್ವರ್ಣಲತಾ, ಚಂದ್ರಮತಿ ಇತರರು ಇದ್ದರು.