ಜಿಲ್ಲೆ

ವಿದ್ಯಾರ್ಥಿಗಳು ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಗಮನ ಹರಿಸಬೇಕು

ಚಾಮರಾಜನಗರ: ವಿದ್ಯಾರ್ಥಿಗಳು ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ತಿಳಿಸಿದರು.

ನಗರದ ವಿಶುವೆಲ್ ಸ್ಟಾೆಕ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರಿಯಾ ಸಚಿವಾಲಯ, ಮೇರ ಯುವ ಭಾರತ್, ಶ್ರೀವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ವತಿಯಿಂದ ಸೋಮವಾರ ಆಯೋಜಿಸಿದ್ದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ನಿರುದ್ಯೋಗಿಗಳ ಸಮಸ್ಯೆಗಳನ್ನು ಬಗೆಹರಿಸಲು ಹಲವಾರು ಯೋಜನೆಗಳನ್ನು ಜಾರಿ ಮಾಡಿದ್ದಾರೆ ಅದನ್ನು ಸರಿಪಯೋಗ ಪಡಿಸಿಕೊಂಡು ಮುಖ್ಯ ವಾಹಿನಿಗೆ ಬರಬೇಕು. ಓದಿದ ವಿದ್ಯಾರ್ಥಿಗಳೆಲ್ಲ ಸರ್ಕಾರಿ ಕೆಲಸ ಸಿಗೋದಿಲ್ಲ ಆದ್ದರಿಂದ ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಅಗತ್ಯ ನೀಡಿ ತಮ್ಮ ಭವಿಷ್ಯ ಉಜ್ವಲ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ನಗರಸಭೆ ಸಮುದಾಯ ಅಧಿಕಾರಿ ವೆಂಕಟ್‌ನಾಯಕ್ ಮಾತನಾಡಿ, ನಗರಸಭೆ ವತಿಯಿಂದ ಯುವಕ ಯುವತಿಯರಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ಚೆಲ್ಲಲು ಹಲವಾರು ಕಾರ್ಯಕ್ರಮಗಳು ಈಗಾಗಲೇ ರೂಪಿಸಲಾಗಿದೆ. ಕಂಪ್ಯೂಟರ್ ಟ್ರೈನಿಂಗ್, ಹೋಲಿಗೆ ಯಂತ್ರ, ಬ್ಯೂಟಿ ಪಾರ್ಲರ್ ಕೋರ್ಸ್ ವಿಶೇಷವಾಗಿ ಶ್ರೀಶಕ್ತಿ ಸಂಘಗಳಿಗೆ ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಹಲವಾರು ಮಹಿಳಾ ಸಂಘಟನೆಗಳು ಇದನ್ನು ಸದುಪಯೋಗಪಡಿಸಿಕೊಂಡಿದ್ದಾರೆ ಮುಖ್ಯ ವಾಹಿನಿಗೆ ಬಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸಂಸ್ಥೆ ಅಧ್ಯಕ್ಷ ಜಿ. ಬಂಗಾರು ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, 18 ವರ್ಷದ ವಿದ್ಯಾರ್ಥಿಗಳು ಜಿಲ್ಲಾ ಆಡಳಿತ ಭವನ ಎರಡನೇ ಮಹಡಿಯಲ್ಲಿ ಭಾರತ ಸರ್ಕಾರದ ಮೇರಾ ಯುವ ಭಾರತ್ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡು ಸರ್ಕಾರದ ಸೌಲಭ್ಯಗಳು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು. ಹಾಗೂ ನಮ್ಮ ಸಂಸ್ಥೆ ವತಿಯಿಂದ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಮಾತನಾಡಿ, ಇಂದಿನ ಯುವಕರು ಯುವತಿಯರು, ರಸ್ತೆ ಬದಿಯಲ್ಲಿ ಮಾರುವ ತಿಂಡಿಗಳನ್ನು ತಿನ್ನಬಾರದು. ಆರೋಗ್ಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇನ್ನರ್ ವೀಲ್ ಸಂಸ್ಥೆ ಅಧ್ಯಕ್ಷ ಲಕ್ಷ್ಮೀ ಶಿವಕುಮಾರ್ ಮಾತನಾಡಿ, ಭಾರತ ದೇಶದ ನರೇಂದ್ರ ಮೋದಿ ಅವರು ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಕಲ್ಪಿಸಿದ್ದಾರೆ. ಈ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ನಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕಲಿಸಿ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಹೇಳಿದರು. ತರಬೇತಿ ಕೇಂದ್ರದ ಮುಖ್ಯ ಶಿಕ್ಷಕಿ ಸುಧಾರಾಣಿ, ನಗರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರಾಜು, ಸಹನಾ, ಸಂತೋಷ್, ವೀಣಾ, ಎಂ.ಲತಾ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.