ಜಿಲ್ಲೆ

ವಿದ್ಯಾರ್ಥಿನಿ ಆತ್ಮಹತ್ಯೆ

Kodagu


ಮಡಿಕೇರಿ : ಶನಿವಾರಸಂತೆಯ ಕೊಡ್ಲಿಪೇಟೆ ಸಮೀಪದ ಶಿವರಳ್ಳಿ ಗ್ರಾಮದಲ್ಲಿ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ನಿವಾಸಿ ಜಿತೇಂದ್ರ, ಅಕ್ಷತಾ ದಂಪತಿ ಪುತ್ರಿ ವೈಷ್ಣವಿ (13) ಮೃತ. ಸೋಮವಾರಪೇಟೆಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಒಂದು ವಾರದಿಂದ ವೈಷ್ಣವಿ ಖಿನ್ನತೆಯಿಂದ ಬಳಲುತ್ತಿದ್ದ್ದಳು. ಶನಿವಾರ ರಾತ್ರಿ ಮನೆಯ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಬೆಳಗ್ಗೆ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.