ಜಿಲ್ಲೆ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಶಿಕ್ಷಕ ಅಮಾನತು

ಆಳಂದ: ಪಟ್ಟಣದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ಸಹ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಎನ್ನಲಾದ ದೂರಿನ ಮೇರೆಗೆ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತು ಮಾಡಿ, ಬಿಇಒ ಸಿ.ಜೆ.ಹಳ್ಳದ ಆದೇಶಿಸಿದ್ದಾರೆ. ಜು.೩೧ರಂದು ಶಾಲೆಯಲ್ಲಿ ಸಹ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಮನೆಯಲ್ಲಿ ಹೋಗಿ ಪಾಲಕರಿಗೆ ತಿಳಿಸಿದ್ದಾಳೆ. ಪಾಲಕರು ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡು ಪಟ್ಟಣದ ಬೇರೆ ಶಾಲೆಗೆ ವರ್ಗಾವಣೆ ಮಾಡಿ, ವಿದ್ಯಾರ್ಥಿನಿಯನ್ನು ದಾಖಲಿಸಿದ್ದಾರೆ. ಸೋಮವಾರ ಶಾಲೆಗೆ ಹೋಗಿರುವ ಪಾಲಕರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಂಗಳವಾರ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು, ಪರಿಶೀಲಿಸಿ ಉಪ ನಿರ್ದೇಶಕರಿಗೆ ವರದಿ ಸಲ್ಲಿಸಿದಾಗ ತಕ್ಷಣದಲ್ಲಿ ಜಾರಿ ಬರುವಂತೆ ಶಿಕ್ಷಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.