ಜಿಲ್ಲೆ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಎ.ಎಸ್.ಮಣಿಕಂಠ

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 2.50 ಲಕ್ಷ ರೂ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ 1 ಲಕ್ಷ ರೂ. ಮಿತಿಯೊಳಗಿರಬೇಕು. ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ ಜೂ.16 ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜೂ.30 ಅಂತಿಮ ದಿನವಾಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಜಿಲ್ಲಾ, ತಾಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ದೂ.ಸಂ 08226-222180, ಚಾಮರಾಜನಗರ ತಾಲೂಕು ದೂ.ಸಂ 08226-222069, ಗುಂಡ್ಲುಪೇಟೆ ತಾಲೂಕು 08229-297091, ಕೊಳ್ಳೇಗಾಲ ತಾಲೂಕು 08224-253141, ಯಳಂದೂರು ತಾಲೂಕು 08226-240221 ಹಾಗೂ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.