ಗೋಣಿಕೊಪ್ಪಲು: ಗ್ರಾಮಗಳಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಒದಗಿಸುವ ಸಲುವಾಗಿ ಶನಿವಾರ ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ ಕೇಂದ್ರ ನಿರ್ಮಾಣಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ಈ ಉಪ ಕೇಂದ್ರದಿಂದ 11 ಕೆವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗೆ ಹೊರ ಹೋಗಲಿದೆ. ಸುಮಾರು 19.34 ಕೋಟಿ ರೂ.ವೆಚ್ಚದ ಈ ಯೋಜನೆಯ ಒಂದು ವರ್ಷದ ಕಾಲಾವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ವಿದ್ಯುತ್ ಇಲಾಖೆಯ ಮುಖ್ಯ ಅಧಿಕಾರಿ ರೋಷನ್ ಅಪ್ಪಚ್ಚು ತಿಳಿಸಿದರು.
ಶಾಸಕರ ಪ್ರಯತ್ನದಿಂದಾಗಿ ಕ್ಷೇತ್ರದಾದ್ಯಂತ ಹಲವು ವಿದ್ಯುತ್ ಉಪ-ಕೇಂದ್ರಗಳು ಸ್ಥಾಪನೆಗೊಳ್ಳುತ್ತಿದ್ದು, ಹುದಿಕೇರಿಯಲ್ಲಿ ಇಂದು ಭೂಮಿಪೂಜೆ ನೆರವೇರಿಸಿದ ಬಳಿಕ ಮಾತನಾಡಿ, ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸೆಸ್ಕ್ ಅಧಿಕಾರಿಗಳು, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್, ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಣಲಮಾಡ ಲಾಲಾ ಅಪ್ಪಣ್ಣ, ಹುದಿಕೇರಿ ಪಂಚಾಯಿತಿ ಅಧ್ಯಕ್ಷೆ ಕುಪ್ಪಣಮಾಡ ನವ್ಯಾ ಕಾವೇರಮ್ಮ, ಹಿರಿಯ ಕಾಂಗ್ರೆಸ್ ಮುಖಂಡರಾದ ಚೇಕ್ಕೇರ ವಾಸು ಕುಟ್ಟಪ್ಪ, ಚೆಕ್ಕೇರ ಸುಧೀರ್, ಮೋಟಯ್ಯ, ಡಿಸಿಸಿ ಸದಸ್ಯರಾದ ಮುಕಟ್ಟೀರ ಸಂದೀಪ್, ಅಜ್ಜಿಕುಟ್ಟಿರ ಗಿರೀಶ್, ನೂರೇರ ಮನೋಹರ್, ಅಣಲಮಾಡ ಹರೀಶ್, ಅಲಿರಾ ರಶೀದ್, ಕುಪ್ಪಣ ಮಾಡ ಕಾವೇರಮ್ಮ, ಕೊಡಗಡ ವಾಸು, ಕೊಡಂಗಡ ದಮಯಂತಿ ಹಾಗೂ ಪ್ರಮುಖರು ಹಾಜರಿದ್ದರು.