ಜಿಲ್ಲೆ

ವಿದ್ಯುತ್ ಕಂಬಕ್ಕೆ ಜೀಪ್ ಡಿಕ್ಕಿ

ನಾಪೋಕ್ಲು: ಬಲ್ಲಮಾವಟಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ ಜೀಪ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸೋಮವಾರಪೇಟೆಯಿಂದ ಅಯ್ಯಂಗೇರಿ ಗ್ರಾಮಕ್ಕೆ ನಾಪೋಕ್ಲು ಮುಖಾಂತರ ತೆರಳುತ್ತಿದ್ದ ಜೀಪ್ ಬಲ್ಲಮಾವಟಿ ಆಯುರ್ವೇದಿಕ್ ಆಸ್ಪತ್ರೆಯ ಸಮೀಪ ಚಾಲಕರ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ವಿದ್ಯುತ್ ಕಂಬ ಮುರಿದಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಈ ಬಗ್ಗೆ ದೂರು ದಾಖಲಾಗಿಲ್ಲ.