ಜಿಲ್ಲೆ

ವಿದ್ಯುತ್ ತಗುಲಿ ಕಾರ್ಮಿಕ ಸಾವು.

ವಿಜಯಪುರ: ಆಕಸ್ಮಿಕ ವಿದ್ಯುತ್ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ನಂದಿ ತರಕಾರಿ ಮಾರುಕಟ್ಟೆಯ ಪಕ್ಕದ ವಾಣಿಜ್ಯ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲಿ ಜೀವ ಬಿಟ್ಟಿದ್ದಾನೆ ಕಟ್ಟಡ ಕಾರ್ಮಿಕ. ಪಟ್ಟಣದ ಶಿವಾಜಿ ಗಲ್ಲಿಯ ನಿವಾಸಿ ಚಂದ್ರಕಾಂತ ಗೋಡೆಕಟ್ಟಿ(45) ಮೃತ ಪಟ್ಟ ದುರ್ದೈವಿಯಾಗಿದ್ದಾನೆ. ವಾಣಿಜ್ಯ ಸಂಕೀರ್ಣದಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಕಾರ್ಮಿಕ, ಆಯ ತಪ್ಪಿ ಸರ್ವಿಸ್ ವೈರ್ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ನೋಡಲು ಜನ್ರು ಮುಗಿಬಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಪಿಐ ಬಸವರಾಜ ಪಾಟೀಲ, ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.