ಜಿಲ್ಲೆ

ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ನಾಳೆ

ರಾಜಣ್ಣ

ಮಳವಳ್ಳಿ : ಪಟ್ಟಣದ 66/11 ಕೆ.ವಿ ವಿದ್ಯುತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಬಸ್-ಬಾರ್ ಕಂಡನ್ಸರ್ ಬದಲಾವಣೆ ಕಾಮಗಾರಿ ಕೈಗೊಳ್ಳುವುದರಿಂದ ಆ.22 ರಂದು ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಉಪ ವಿಭಾಗ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹಾಗಾಗಿ ಈ ಮಾರ್ಗದ ವ್ಯಾಪ್ತಿಯಲ್ಲಿರುವ ಮಳವಳ್ಳಿ ಪಟ್ಟಣದ ಸೇರಿದಂತೆ ನಿಡಘಟ್ಟ, ಕಂದೇಗಾಲ, ಚೋಳನಹಳ್ಳಿ, ಗಾಜನೂರು, ಗೌಡಗೆರೆ, ಸುಣ್ಣದದೊಡ್ಡಿ, ಕ್ಯಾತೇಗೌಡನದೊಡ್ಡಿ, ಅಂಕನಹಳ್ಳಿ, ಅಂಚೇದೊಡ್ಡಿ, ಅಮೃತೇಶ್ವರನಹಳ್ಳಿ, ಮೋಳೆದೊಡ್ಡಿ, ಅಣ್ಣಳ್ಳಿ, ಕಲ್ಲುವೀರನಹಳ್ಳಿ, ಕೆಂಬುತಗೆರೆ, ತಮ್ಮಡಹಳ್ಳಿ, ಬುಗತಗಹಳ್ಳಿ, ಗುಳಗಟ್ಟ, ಎಂ.ಬಸವನಪುರ, ಕಾಗೇಪುರ, ನೆಲಮಾಕನಹಳ್ಳಿ, ನೆಲ್ಲೂರು, ತಳಗವಾದಿ, ದೇವಿಪುರ, ಜೆ.ಜಿ.ಪುರ, ಹೊಬ್ಬೇಗೌಡನ ದೊಡ್ಡು ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಉಪ ವಿಭಾಗದ ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪೇಮ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.