ಚಿತ್ರದುರ್ಗ: ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಎಚ್.ಡಿ.ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ಹೊಳೆಲ್ಕೆರೆ, ತುರುವನೂರು, ಜೆ.ಎನ್.ಕೋಟೆ, ಮಲ್ಲಾಡಿಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆ. 19ರಂದು ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಹೀಗಾಗಿ ಅಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಚಿತ್ರದುರ್ಗ ಬೆಸ್ಕಾಂ ವಿಭಾಗ ವ್ಯಾಪ್ತಿಯ ಎಲ್ಲಾ ಮಾರ್ಗದಲ್ಲೂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.